ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 23ಕ್ಕೆ ಏರಿಕೆ ಆಗಿದೆ.
ಮಂಗಳೂರಿನ ತೊಕ್ಕೊಟ್ಟು ಬಳಿ ಸಂತೋಷ್ ನಗರ ನಿವಾಸಿ 52 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆಯ ಪ್ರಮಾಣ ಅಧಿಕವಾಗಿದೆ. ಪ್ರತಿನಿತ್ಯ ರಾಜ್ಯದ ಹೆಲ್ತ್ ಬುಲೆಟಿನ್ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲೇ ಹೆಚ್ಚಿನ ಪ್ರಕರಣಗಳನ್ನು ವರದಿ ಆಗುತ್ತಿವೆ. ಇಂದು ಒಂದೇ ದಿನ 147 ಜನರಿಗೆ ಸೋಂಕು ಹಬ್ಬಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚು ಮಾಡಿದೆ.