ಮಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಇಂದು ಇಂದು ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನ ಹೈರಾಣಾಗಿದ್ದಾರೆ.
ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಬಳಿಕ ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿಯಲ್ಲೂ ಮಳೆಯಾಗಿದೆ. ಪಶ್ಚಿಮ ಘಟ್ಟದಲ್ಲೂ ನಿರಂತರ ಮಳೆಯಾಗಿದ್ದು, ನದಿ ನೀರಿನ ಹರಿವು ಹೆಚ್ಚಾಗಿದೆ. ಸಂಜೆ ವೇಳೆಗೆ ಸಂಪೂರ್ಣ ಮೋಡದಿಂದ ಕತ್ತಲು ಆವರಿಸಿದ್ದು, ಭಾರೀ ಮಳೆಯಾಗಿದೆ.
ದಿನಪೂರ್ತಿ ಬಿಟ್ಟು ಬಿಡದೆ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನೂ ಎರಡು ದಿನಗಳ ಕಾಲ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.