ಮಂಗಳೂರು: ನಾಳೆಯಿಂದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೆ ನದಿ ಪಾತ್ರದ ಹಾಗೂ ಕಡಲತೀರದ ಜನ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ತುಂತುರು ಮಳೆಯಾಗಿದೆ. ಮುಂಜಾನೆಯಿಂದಲೂ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು, ಕೆಲವೊಮ್ಮೆ ಭಾರೀ ಗಾಳಿ ಮಳೆಯಾಗಿದೆ. ಸಂಜೆ ವೇಳೆಗೆ ಮಂಗಳೂರು ನಗರದಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರು ನಗರ ಮಾತ್ರವಲ್ಲದೆ ಬಂಟ್ವಾಳ ಹಾಗೂ ಸುಳ್ಯದಲ್ಲಿ ಹೆಚ್ಚಿನ ಮಳೆಯಾಗಿದೆ.
ಇಂದು ವೀಕೆಂಡ್ ಕಫ್ರ್ಯೂ ಇರೋ ಹಿನ್ನಲೆಯಲ್ಲಿ ಜನ ಮನೆಯಿಂದ ಹೊರ ಬರದೇ ಇದ್ದು, ಮಳೆಗೆ ಬೆಚ್ಚಗೆ ಮನೆಯಲ್ಲೇ ಇದ್ದರು. ಆದರೆ ನಾಳೆಯಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಹಾಗೂ ಕಡಲತೀರದ ಜನ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.