ಮಂಗಳೂರು: ಕೊರೊನಾ ಎಫೆಕ್ಟ್‌ನಿಂದಾಗಿ ದಕ್ಷಿಣ ಕನ್ನಡ ಮತ್ತು ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ.
Advertisement
ಕೇರಳ ಗಡಿಗೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಟಫ್ ರೂಲ್ಸ್ ಗೆ ತಜ್ಞರು ಶಿಪಾರಸ್ಸು ನೀಡಿದ್ದಾರೆ. ಈ ಬೆನ್ನಲ್ಲೆ ಕಠಿಣ ಕಾಯ್ದೆಯನ್ನು ಜಿಲ್ಲಾಡಳಿತ ಹೇರಲು ಮುಂದಾಗಿದೆ. ಇದನ್ನೂ ಓದಿ: ಅಪ್ಪ ಅರೆಸ್ಟ್, ಅಮ್ಮ ಕಣ್ಣೀರು – ಪೋಸ್ಟ್ ಮಾಡಿ ಸುದ್ದಿಯಾದ ಶಿಲ್ಪಾ ಶೆಟ್ಟಿ ಮಗ
Advertisement
Advertisement
Advertisement
ಕೇರಳದಿಂದ ದಕ್ಷಿಣ ಕನ್ನಡದ ಬಾರ್ಡರ್‍ನ ಮದ್ಯದಂಗಡಿಗೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಈಗ ಮದ್ಯದಂಗಡಿಯನ್ನು ಬಂದ್ ಮಾಡಲು ಸೂಚನೆ ಕೊಟ್ಟಿದೆ. ಇಂದಿನಿಂದ ದಿನಾಂಕ 15ರ ತನಕ ಮದ್ಯದಂಗಡಿ ಮುಚ್ಚಿಸಲು ಆದೇಶ ಕೊಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಸುಳ್ಯ, ಪುತ್ತೂರು ತಾಲೂಕು ವ್ಯಾಪ್ತಿಯ ಕೆಲ ಮದ್ಯದಂಗಡಿ ಮುಚ್ಚಲು ಜಿಲ್ಲಾಡಳಿತ ಆದೇಶಿಸಿದೆ.