– ವೀಕೆಂಡ್ ಸಂಪೂರ್ಣ ಲಾಕ್‍ಡೌನ್
ಮಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ನಿಯಮಗಳನ್ನ ಜಾರಿಗೆ ತರಲಾಗಿದೆ. ನಾಳೆಯಿಂದ ಬೆಳಗ್ಗೆ 6 ರಿಂದ ಬೆಳಗ್ಗೆ 9ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
ಮೆಡಿಕಲ್ ನೆಪದಲ್ಲಿ ಹೊರ ಬಂದ್ರೆ ವಾಹನಗಳನ್ನ ಸೀಜ್ ಮಾಡಲಾಗುವುದು. ತಮ್ಮ ಸಮೀಪದ ಮೆಡಿಕಲ್ ಗಳಲ್ಲಿ ಔಷಧಿ ಸೇರಿದಂತೆ ಅಗತ್ಯ ವಸ್ತುಗಳನ್ನ ಖರೀದಿಸಿ ಎಂದು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಜನರ ಅನಗತ್ಯವಾಗಿ ಹೊರ ಬರುವಂತಿಲ್ಲ. ಶುಕ್ರವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳು ಜಾರಿಯಾಗಲಿವೆ ಎಂದು ಜಿಲ್ಲಾಡಳಿತ ಹೇಳಿದೆ.
Advertisement
Advertisement
ಮೇ 15 ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ನೀಡಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ. ಮೇ 15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು. ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಇನ್ನೂ ವೀಕೆಂಡ್ ನಲ್ಲಿ ಅಗತ್ಯ ವಸ್ತುಗಳ ಖರೀದಿಗೂ ಸಮಯ ನೀಡಿಲ್ಲ. ಮುಂಚಿನ ದಿನವೇ ಖರೀದಿಸಬೇಕು.