-ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಮತ್ತು ಗಾಯಾಳುಗಳ ಕುಟುಂಬಕ್ಕೆ ಪ್ರಧಾನಿ ನರೆಂದ್ರ ಮೋದಿ ಅವರು 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಬೇಗವಾಸಿಯಾಗಲಿ, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಾ ಮೃತರ ರಕ್ತಸಂಬಂಧಿಗಳಿಗೆ ತಲಾ 2 ಲಕ್ಷ ರೂಪಾಯಿ, ಪ್ರಧಾನಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಯಿಂದ ಗಾಯಾಳುಗಳಿಗೆ 50,000 ರೂಪಾಯಿ ಹಣವನ್ನು ಪರಿಹಾರವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.
From the PMNRF, Ex-gratia of Rs. 2 lakh each would be given to the next of kin of those who have lost their lives due to the accident in West Bengal. Rs. 50,000 each would be given to those injured.
— PMO India (@PMOIndia) January 20, 2021
ದಟ್ಟವಾದ ಮಂಜು ಆವರಿಸಿದ ಪರಿಣಾಮ ಚಾಲಕನಿಗೆ ರಸ್ತೆ ಕಾಣಿಸದೆ ವಾಹನವೊಂದು ಅಪಘಾತಕ್ಕೀಡಾಗಿತ್ತು. ಈ ವೇಳೆ 14 ಮಂದಿ ಧಾರುಣವಾಗಿ ಮೃತಪಟ್ಟಿದ್ದಾರೆ ಹಾಗೂ 18 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
Ex-gratia of Rs. 2 lakh each from PMNRF would be given to the next of kin of those who have lost their lives due to the accident in Surat. Rs. 50,000 each would be given to those injured.
— PMO India (@PMOIndia) January 19, 2021
ಕಲ್ಲು ಬಂಡೆಯನ್ನು ತುಂಬಿದ್ದ ಟ್ರಕ್ ಮತ್ತೊಂದು ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ವೇಳೆ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆ ರಾಂಗ್ ರೂಟ್‍ನಲ್ಲಿ ಬರುತ್ತಿದ್ದ ಇತರ ಎರಡು ವಾಹನಗಳು ಟ್ರಕ್‍ಗೆ ಡಿಕ್ಕಿ ಹೊಡೆದಿದ್ದು, ಇದರಿಂದಾಗಿ ಟ್ರಕ್‍ನಲ್ಲಿ ತುಂಬಿದ ಬಂಡೆಗಳು ವಾಹನದ ಮೇಲೆ ಬಿದ್ದವು. ಟ್ರಕ್‍ನ ಮುಂಭಾಗದಲ್ಲಿದ್ದ ಮತ್ತೊಂದು ಸಣ್ಣ ಲಾರಿ ಕೂಡ ಹಾನಿಯಾಗಿದೆ. ಒಟ್ಟಾರೆಯಾಗಿ ಈ ಅಪಘಾತದಲ್ಲಿ ನಾಲ್ಕು ವಾಹನಗಳು ಹಾನಿಗೊಳಗಾಗಿವೆ.
The road accident in Dhupguri in Jalpaiguri (West Bengal) is extremely anguishing. In this time of sadness, prayers with the bereaved families. May the injured recover soon: PM @narendramodi
— PMO India (@PMOIndia) January 20, 2021
ಈ ಅಪಘಾತದಲ್ಲಿ ಟ್ರಕ್ ಚಾಲಕ ಬದುಕುಳಿದಿದ್ದಾನೆ. ಆತನನ್ನು ಬಂಧಿಸಿದ್ದೇವೆ ವಿಚಾರಣೆ ನಡೆಸುತ್ತೇವೆ. ಅಪಘಾತಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದು ಜಲ್ಪೈಗುರಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸುಮಂತ್ ರಾಯ್ ಹೇಳಿದ್ದಾರೆ.