ಮಂಗಳೂರು: ರಾಜ್ಯದ ಶಿಕ್ಷಣ ಇಲಾಖೆ ವಿದ್ಯಾಗಮ ಯೋಜನೆಯು ಅನೇಕ ಮಕ್ಕಳ ಜೊತೆಗೆ ಶಿಕ್ಷಕರಿಗೂ ಕಂಟಕವಾಗಿದೆ. ವಿದ್ಯಾಗಮ ಯೋಜನೆಯಡಿಯಲ್ಲಿ ಮಕ್ಕಳಿಗೆ ಪಠ್ಯ ಬೋಧಿಸಿದ ಶಿಕ್ಷಕವರ್ಗದ ಪೈಕಿ ಅನೇಕರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ನಡುವೆ ವಿದ್ಯಾಗಮ ಯೋಜನೆಯಡಿಯಲ್ಲಿ ಕರ್ತವ್ಯ ನಿರ್ವಹಿಸಿ, ಸೋಂಕಿಗೆ ತುತ್ತಾಗಿ ಒದ್ದಾಡುತ್ತಿರುವ ಶಿಕ್ಷಕರ ಪುತ್ರಿಯೊಬ್ಬಳು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾಳೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಶಿರ್ತಾಡಿಯ ಮಕ್ಕಿಯ ಡಿಜೆ ಹೈಯರ್ ಪ್ರೈಮರಿ ಏಡೆಡ್ ಸ್ಕೂಲ್ ಮತ್ತು ಮೂಡಬಿದ್ರೆಯ ಜವಹರಲಾಲ್ ನೆಹರೂ ಅನುದಾನಿತ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಶಶಿಕಾಂತ್ ವೈ ಮತ್ತು ಪದ್ಮಾಕ್ಷಿ ಎನ್ ಕೆಲಸಮಾಡುತ್ತಿದ್ದಾರೆ. ಈ ದಂಪತಿಯ ಪುತ್ರಿ ಐಶ್ವರ್ಯಾ ಜೈನ್ ಇದೀಗ ಪತ್ರವನ್ನು ಬರೆದಿದ್ದಾಳೆ.
Advertisement
Advertisement
ನನ್ನ ಹೆತ್ತವರಿಬ್ಬರೂ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇದೀಗ ತಂದೆ ಮತ್ತು ತಾಯಿ ಇಬ್ಬರೂ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಈ ನಡುವೆ ತಾಯಿಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 29ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆಯೂ ಸೋಂಕಿನಿಂದ ಬಳಲುತ್ತಿದ್ದು ಇದೀಗ ಆಸ್ಪತ್ರೆಯ ಬಿಲ್ ಕಟ್ಟಲು ಸಾಧ್ಯವಾಗದೆ ಒದ್ದಾಡುತ್ತಿದ್ದಾರೆ.
Advertisement
ನಮಗೊಂದು ಸಹಾಯದ ಹಸ್ತ ಬೇಕಿದೆ. ನನ್ನ ತಾಯಿಯು ಈ ವಿದ್ಯಾಗಮ ಯೋಜನೆಯ ಮುಂಚೆ ಸಂಪೂರ್ಣವಾಗಿ ಆರೋಗ್ಯವಾಗಿದ್ದರು. ತಮ್ಮ ಯೋಜನೆಯೇ ಇದಕ್ಕೆ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಸಾಧ್ಯವಾದಷ್ಟು ಬೇಗ ತಮ್ಮಿಂದ ಆರ್ಥಿಕ ಸಹಾಯವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಸರ್ಕಾರವು ಶಿಕ್ಷಕರನ್ನು ಕೈಬಿಡುವುದಿಲ್ಲ ಎಂದು ನಂಬಿದ್ದೇವೆ ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾಳೆ.