ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ನಿರ್ದೇಶಕ ಮಂಸೋರೆ ಅವರು ತಮ್ಮ ಬಹುಕಾಲದ ಗೆಳತಿ ಅಖಿಲಾ ಜೊತೆಗೆ ಇಂದು ದಾಂಪತ್ಯಜೀವನಕ್ಕೆ ಕಾಲಿಟ್ಟಿದ್ದಾರೆ.
ಜುಲೈ 4ರಂದು ಬೆಂಗಳೂರಿನಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಇಂದು ಕನಕಪುರ ರಸ್ತೆಯ ತಲಘಟ್ಟಪುರ ಬಳಿ ಇರುವ ಶಿಬ್ರಾವ್ಯಿ ಕೋರ್ಟ್ ಯಾರ್ಡ್‍ನಲ್ಲಿ ಸಪ್ತಪದಿ ತುಳಿದಿದೆ. ಕೋವಿಡ್ ನಿಮಯಗಳನ್ನು ಅನುಸರಿಸಿ, ಈ ಮದುವೆ ಮಾಡಲಾಗಿದೆ. ಇದನ್ನೂ ಓದಿ: ನಿರ್ದೇಶಕ ಮಂಸೋರೆ ನಿಶ್ಚಿತಾರ್ಥ: ಆಗಸ್ಟ್‌ನಲ್ಲಿ ಮದುವೆ
2014ರಲ್ಲಿ ಮಂಸೋರೆ ಅವರು ಮೊದಲು ನಿರ್ದೇಶಿಸಿದ ಹರಿವು ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ ಬಂದಿತ್ತು. ಹರಿವು ಚಿತ್ರದಲ್ಲಿ ಸಂಚಾರಿ ವಿಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. ಮಂಸೋರೆ ನಿರ್ದೇಶನದಲ್ಲಿ, ಶೃತಿ ಹರಿಹರನ್ ಮತ್ತು ಸಂಚಾರಿ ವಿಜಯ್ ನಟಿಸಿ, 2018ರಲ್ಲಿ ಬಿಡುಗಡೆಯಾಗಿದ್ದ ನಾತಿಚರಾಮಿ ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ, ಮಂಸೋರೆ ಅವರಿಗೆ ಉತ್ತಮ ಸಾಹಿತ್ಯಕ್ಕೆ ರಾಷ್ಟ್ರಪ್ರಶಸ್ತಿ ಮತ್ತು ಇತರೆ ಮೂರು ವಿಭಾಗಗಳಲ್ಲಿ ರಾಷ್ಟ್ರಪ್ರಶಸ್ತಿ ಗೌರವ ಸಿಕ್ಕಿದ್ದು, ಅದೇ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯ ಗರಿ ಸಿಕ್ಕಿತ್ತು.