ಬೆಂಗಳೂರು: ಇಂದು ರಾಜ್ಯದಲ್ಲಿ ದಾಖಲೆಯ 14,738 ಮಂದಿಗೆ ಕೊರೊನಾ ಬಂದಿದೆ. ಈ ಪೈಕಿ 3,591 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ 66 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲೇ ಬರೋಬ್ಬರಿ 10,497 ಮಂದಿಗೆ ಸೋಂಕು ಬಂದಿದ್ದರೆ 30 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಐಸಿಯುನಲ್ಲಿ 174 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಗಳ ಪೈಕಿ ಕಲಬುರಗಿ 624, ತುಮಕೂರು 387, ಬೀದರ್ 363, ಮೈಸೂರು 327, ಬಳ್ಳಾರಿ 200 ಮಂದಿಗೆ ಸೋಂಕು ಬಂದಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ. ಈ ಪೈಕಿ 9,99,958 ಮಂದಿ ಬಿಡುಗಡೆಯಾಗಿದ್ದು, 96,561 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 555 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒಟ್ಟು 11,192 ಆಂಟಿಜನ್ ಟೆಸ್ಟ್, 1,18,208 ಆರ್‌ಟಿಪಿಸಿಆರ್ ಟೆಸ್ಟ್ ಸೇರಿದಂತೆ ಒಟ್ಟು 1,29,400 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ.
ಐಸಿಯುನಲ್ಲಿ ಬೆಂಗಳೂರು 174, ಕಲಬುರಗಿ 81, ಕೋಲಾರ 43, ಧಾರವಾಡ 25 ಮಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.