ದಾವಣಗೆರೆ: ರಂಜಾನ್ ಹಬ್ಬಕ್ಕೆ ದಾವಣಗೆರೆ ಪೊಲೀಸರು 50ಕ್ಕೂ ಹೆಚ್ಚು ಕುಟುಂಬಗಳಿಗೆ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.
ಲಾಕ್‍ಡೌನ್ ನಿಂದ ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಜನರಿಗೆ ಒಂದೊತ್ತಿನ ಊಟಕ್ಕೂ ಸಹ ಕಷ್ಟವಾಗುತ್ತದೆ. ರಂಜಾನ್ ಹಬ್ಬ ಬಂದಿದ್ದು, ಕೂಲಿ ಮಾಡುವ ಜನರು ಸಾಕಷ್ಟು ತೊಂದರೆ ಪಡುವಂತಾಗಿದೆ. ಇವರ ಕಷ್ಟವನ್ನು ನೋಡಿದ ದಾವಣಗೆರೆಯ ಅಜಾದ್ ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಶೈಲಜಾ ತಮ್ಮ ಸ್ವಂತ ಖರ್ಚಿನಲ್ಲಿ 50ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ ಮಾಡಿದರು.
Advertisement
Advertisement
ಅಜಾದ್ ನಗರ, ಭಾಷಾ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಕೂಲಿ ಮಾಡಿ ಜೀವನ ನಡೆಸುವ ಜನರೇ ಜಾಸ್ತಿ. ಈಗ ರಂಜಾನ್ ಹಬ್ಬ ಬಂದಿದ್ದರಿಂದ ಕೂಲಿ ಇಲ್ಲದೆ ಹಬ್ಬವನ್ನು ಆಚರಣೆ ಮಾಡಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಪಿಎಸ್‍ಐ ಶೈಲಜಾ ರಂಜಾನ್ ಹಬ್ಬಕ್ಕೆ ಬೇಕಾಗುವ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿದರು.
Advertisement
Advertisement
ಪೊಲೀಸ್ ಅಧಿಕಾರಿಗಳ ಮೂಲಕ ಐವತ್ತಕ್ಕೂ ಹೆಚ್ಚು ಜನರಿಗೆ ಕಿಟ್ ವಿತರಣೆ ಮಾಡಿದರು. ಅಜಾದ್ ನಗರ ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶಂಸೆ ವ್ಯಕ್ತವಾಗಿದೆ.