ನವದೆಹಲಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಹೈ ಕಮಾಂಡ್‍ನ ವಿವಿಧ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.
ಇಂದು ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರಾದ ದಿಗ್ವಿಜಯ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. pic.twitter.com/ej8LqkCfR3
— Siddaramaiah (@siddaramaiah) July 21, 2021
ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆಂಟನಿ ಅವರನ್ನು ಸಹ ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಹೀಗೆ ಕಾಂಗ್ರೆಸ್‍ನ ವಿವಿಧ ಹಿರಿಯ ನಾಯಕರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.
ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. pic.twitter.com/iY3D4g2ZY3
— Siddaramaiah (@siddaramaiah) July 21, 2021
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಲಿಂಗಾಯತ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬೆಂಬಲ ಸೂಚಿಸಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನಾಯಕರ ಜೊತೆ ಮಾತನಾಡುತ್ತೇನೆ. ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜೊತೆ ಈ ಕುರಿತು ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.
Met senior @INCIndia leader & General Secretary Shri @kcvenugopalmp in New Delhi today and discussed about various issues. pic.twitter.com/T4Oi9ORKGp
— Siddaramaiah (@siddaramaiah) July 21, 2021
ದೆಹಲಿ ಪ್ರವಾಸ ಮುಗಿಸಿರುವ ಸಿದ್ದರಾಮಯ್ಯ, ಇಂದು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಕೆ.ಸಿ.ವೇಣುಗೋಪಾಲ್ ಅವರ ಭೇಟಿ ಮುಗಿಸಿ ಬೆಂಗಳೂರಿಗೆ ಮರಳಿದ್ದಾರೆ.
Met senior @INCIndia leader Shri A K Antony in New Delhi today and discussed about various issues. pic.twitter.com/aveFHSaZEO
— Siddaramaiah (@siddaramaiah) July 21, 2021