ನವದೆಹಲಿ: ದೀಪಾವಳಿ ಹಿನ್ನೆಲೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.
ಕೊರೊನಾ ಸೋಂಕಿನ ನಡುವೆಯೂ ಭಾರತ ಸರಳವಾಗಿ ದೀಪಾವಳಿ ಹಬ್ಬವನ್ನು ಆಚರಣೆ ಮಾಡುತ್ತಿದೆ. ಸದ್ಯ ಆಸ್ಟ್ರೇಲಿಯಾದಲ್ಲಿರುವ ಕೊಹ್ಲಿ, ಟ್ವಿಟ್ಟರಿನಲ್ಲಿ ವೀಡಿಯೋ ಹಂಚಿಕೊಳ್ಳುವ ಮೂಲಕ ಪಟಾಕಿ ಹೊಡೆಯದೆ ಶಾಂತಿ ರೀತಿಯಲ್ಲಿ ದೀಪಾವಳಿ ಆಚರಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
Happy Diwali ???????? pic.twitter.com/USLnZnMwzT
— Virat Kohli (@imVkohli) November 14, 2020
ತಮ್ಮ ಟ್ವಿಟ್ಟರಿನಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ವಿರಾಟ್ ಕೊಹ್ಲಿ, ನನ್ನ ಕಡೆಯಿಂದ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು. ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ. ಜೊತೆಗೆ ಈ ಬಾರಿ ದೀಪಾವಳಿಯಲ್ಲಿ ಪಟಾಕಿಯನ್ನು ಸಿಡಿಸಬೇಡಿ. ಪರಿಸರವನ್ನು ಸಂರಕ್ಷಿಸಿ ಜೊತೆಗೆ ನಿಮ್ಮ ಪ್ರೀತಿ ಪಾತ್ರರ ಜೊತೆ ಮನೆಯಲ್ಲೇ ದೀಪಾವಳಿಯನ್ನು ಆಚರಿಸಿ ಎಂದು ಕೇಳಿಕೊಂಡಿದ್ದಾರೆ.
ಸದ್ಯ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾಗೆ ಪ್ರವಾಸ ಕೈಗೊಂಡಿದೆ. ಐಪಿಎಲ್ ಮುಗಿದ ಬಳಿಕ ಇಂಡಿಯಾದ ಆಟಗಾರರು ಯುಎಇಯಿಂದ ನೇರವಾಗಿ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಈ ನಡುವೆ ಆಸೀಸ್ ತಲುಪಿದ ಅವರನ್ನು ಕ್ವಾರಂಟೈನ್ ಮಾಡಲಾಗಿದ್ದು, ದೀಪಾವಳಿ ಹಬ್ಬದಲ್ಲೂ ಆಟಗಾರರು ರೂಮಿನಿಂದ ಹೊರಬರುವಂತಿಲ್ಲ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಅವರು ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕಿದೆ.
ಭಾರತ-ಆಸ್ಟ್ರೇಲಿಯಾ ಸರಣಿಯು ನವೆಂಬರ್ 27ರಂದು ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಏಕದಿನ ಪಂದ್ಯದ ನಂತರ ಉಭಯ ತಂಡಗಳು ಮೂರು ಪಂದ್ಯಗಳ ಟಿ-20 ಸರಣಿ ಆಡಲಿವೆ. ನಂತರ ಡಿಸೆಂಬರ್ 17ರಿಂದ ಇಂಡಿಯಾ ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರಾರಂಭವಾಗಲಿದೆ. ಅಡಿಲೇಡ್‍ನಲ್ಲಿ ಆಡಲಿರುವ ಡೇ/ನೈಟ್ ಪಂದ್ಯದ ನಂತರ ಕೊಹ್ಲಿ ಭಾರತಕ್ಕೆ ಮರಳಲಿದ್ದಾರೆ.