ಬೆಂಗಳೂರು: ನಟಿ ಮಯೂರಿ ದೀಪಾವಳಿ ದಿನದಂದೇ ಗುಡ್ ನ್ಯೂಸ್ ಒಂದನ್ನು ಬಹಿರಂಗಪಡಿಸಿದ್ದಾರೆ.
ಮದುವೆ ಬಗ್ಗೆಯೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದ ಮಯೂರಿ, ಇದೀಗ ತಾನು ತಾಯಿಯಾಗುತ್ತಿರುವ ವಿಚಾರ ಕೂಡ ತಿಳಿಸಿದ್ದಾರೆ. ಈಗಾಗಲೇ ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಕೊಂಡಿದ್ದು, ಆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಶುಭದಿನದಂದು ನಾವು ಪುಟ್ಟ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ. ನಟಿಯ ಪೋಸ್ಟ್ ಗೆ ಎಲ್ಲರೂ ಕಾಮೆಂಟ್ ಮಾಡಿ ಕಂಗ್ರಾಟ್ಸ್ ಹೇಳುತ್ತಿದ್ದಾರೆ.
View this post on Instagram
ಇದೇ ವರ್ಷ ಜೂನ್ 12ರಂದು ತನ್ನ ಬಹುಕಾಲದ ಗೆಳೆಯ ಅರುಣ್ ಜೊತೆ ಮಯೂರಿ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶುಭಲಗ್ನದಲ್ಲಿ ಮದುವೆಯಾಗಿದ್ದರು. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷದಿಂದ ಪರಸ್ಪರ ಪ್ರೀತಿಸಿ, ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದರು.
View this post on Instagram
ತನ್ನ ಮದುವೆ ವಿಚಾರವಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿಕೊಂಡಿದ್ದ ಮಯೂರಿ, ಹೌದು ನಾನು ಮದುವೆಯಾದೆ ಎಂದು ಬರೆದು ಅವರ ಮದುವೆ ವಿಡಿಯೋವನ್ನು ಕೂಡ ಹಂಚಿಕೊಂಡಿದ್ದರು. ಮೊದಲು ಕಿರುತೆರೆಯ ಮೂಲಕ ನಟನೆಗೆ ಎಂಟ್ರಿಕೊಟ್ಟಿದ್ದ ಮಯೂರಿ ನಂತರ ಸಿನಿಮಾಗಳನ್ನು ಮಾಡಿ ಜನಮನ್ನಣೆ ಪಡೆದಿದ್ದರು. ನಟ ಅಜಯ್ ರಾವ್ ಅವರ ಜೊತೆ ‘ಕೃಷ್ಣ ಲೀಲಾ’ ಎಂಬ ಸಿನಿಮಾದಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು.