ಮೈಸೂರು: ಬೆಳಕಿನ ಹಬ್ಬ ದೀಪಾವಳಿಯಂದೇ ಪತಿಮಹಾಶಯನೊಬ್ಬ ತನ್ನ ಪತ್ನಿಗೆ ಬೆಂಕಿ ಇಟ್ಟ ಘಟನೆ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲೂಕಿನ ದೊಡ್ಡಮುಲಗೂಡು ಗ್ರಾಮದಲ್ಲಿ ನಡೆದಿದೆ.
ರಮೇಶ್ (30) ಪತ್ನಿಯನ್ನು ಕೊಲೆಗೈದಿರುವ ಆರೋಪಿ. ಈತ ಪತ್ನಿ ಶಾಂತಮ್ಮ (22)ಳನ್ನು ಕೊಲೆ ಮಾಡಿದ್ದಾನೆ. ಪತ್ನಿಯನ್ನು ಕೊಲೆ ಮಾಡಿ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ್ದಾನೆ.
ದೊಡ್ಡಮುಲಗೂಡು ಗ್ರಾಮದ ಗ್ರಾಮ ಪಂಚಾಯ್ತಿ ಸದಸ್ಯನಾಗಿರುವ ರಮೇಶ್, ಹೆಂಡ್ತಿಯನ್ನು ಕೊಲೆ ಮಾಡಿದ ಬಳಿಕ ಸ್ಥಳದಿಂದ ಕಾಲ್ಕಿತ್ತು, ತಲೆಮರೆಸಿಕೊಂಡಿದ್ದಾನೆ. ಕೊಲೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಹೀಗಾಗಿ ಹತ್ಯೆ ಸಂಬಂಧ ಮಾಹಿತಿ ಕಲೆ ಹಾಕುತ್ತಿರುವ ಬನ್ನೂರು ಠಾಣೆ ಪೊಲೀಸರು, ಸದ್ಯ ಆರೋಪಿಯ ಪತ್ತೆಗೆ ಬಲೆಬೀಸಿದ್ದಾರೆ.
ಘಟನೆ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.