-ಸರ್ಕಾರ ಅಸ್ತು ಅಂದ್ರೆ ಜೇಬಿಗೆ ಕತ್ತರಿ ಫಿಕ್ಸ್
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಈ ನಡುವೆ ಕೊರೊನಾ ಚಿಕಿತ್ಸೆ ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆಯಾ ಅನ್ನೋ ಸುಳಿವು ಸಿಗುತ್ತಿದೆ.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ ಹೋದ್ರೆ ಉಚಿತ ಚಿಕಿತ್ಸೆ ದೊರೆಯುವ ಕಷ್ಟ ಎನ್ನಲಾಗುತ್ತಿದೆ. ಎಲ್ಲ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡೋದು ಅನುಮಾನ. ಹಾಗಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಮುಂದಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.
Advertisement
ಲಕ್ಷ ಲಕ್ಷ ಬೇಕು?: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಚಿಕಿತ್ಸೆ ನೀಡಲು ಸರ್ಕಾರ ಅಸ್ತು ಅಂದ್ರೆ ರೋಗಿಗಳು ಲಕ್ಷ ಲಕ್ಷ ಹಣವನ್ನು ಸಿದ್ಧ ಮಾಡಿಕೊಳ್ಳಬೇಕು. ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಅಂದಾಜು 3 ರಿಂದ 4 ಲಕ್ಷ ಬಿಲ್ ಮಾಡುವ ಸಾಧ್ಯತೆಗಳಿವೆ. ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆಗಳು ಸುಸಜ್ಜಿತವಾಗಿಲ್ಲ. ಸರ್ಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿ ಇಲ್ಲದ ಆತಂಕದಿಂದ ಸರ್ಕಾರ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದೆ ಎಂದು ತಿಳಿದು ಬಂದಿದೆ.
Advertisement
Advertisement
ಸರ್ಕಾರಿ ಆಸ್ಪತ್ರೆಗಳ ಬೆಡ್ ತುಂಬಿದ್ರೆ ರೋಗಿ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಬೇಕು. ಹಾಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಮತ್ತು ವೆಂಟಿಲೇಟರ್ ದರ ಗಗನಕ್ಕೇರುವ ಸಾಧ್ಯತೆಗಳು ಹೆಚ್ಚಿವೆ.