ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶ (ಎನ್‍ಸಿಆರ್) ದಲ್ಲಿ ಅಕ್ಟೋಬರ್ 31 ರವರೆಗೆ ಪಟಾಕಿಗಳನ್ನು ಮಾರಾಟವನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ಹೆಚ್ಚಾಗುವ ಕಾರಣ 2016 ನವೆಂಬರ್ ನಲ್ಲಿಯೇ ಸುಪ್ರೀಂ ಕೋರ್ಟ್ ಎನ್‍ಸಿಆರ್ ವ್ಯಾಪ್ತಿಯ ಪ್ರದೇಶದಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿತ್ತು. ಕಳೆದ ತಿಂಗಳು ಕೋರ್ಟ್ ತಾತ್ಕಾಲಿಕವಾಗಿ ಪಟಾಕಿ ಮಾರಾಟವನ್ನು ನಿಷೇಧಿಸಿತ್ತು.
Advertisement
2015 ರಲ್ಲಿ ದೀಪಾವಳಿ ಹಬ್ಬದಂದು ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದರಿಂದ ಜನರಿಗೆ ಹಲವಾರು ಆರೋಗ್ಯ ಸಮಸ್ಯೆಗಳು ಕಂಡುಬಂದಿತ್ತು. ಹೀಗಾಗಿ 2015 ರಲ್ಲಿ ಮೂವರು ಬಾಲಕರು ದೆಹಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿ ಎಂದು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
Advertisement
ಆರೋಗ್ಯ ಪೂರ್ಣವಾಗಿ ಜೀವನ ನಡೆಸಬೇಕೆಂದು ಸಂವಿಧಾನ ನಮಗೆ ಬದುಕುವ ಹಕ್ಕು ನೀಡಿದೆ. ಆದರೆ ಪಟಾಕಿಯಲ್ಲಿರುವ ರಾಸಾಯನಿಕ ಅಂಶಗಳಿಂದಾಗಿ ವಾಯುಮಾಲಿನ್ಯ ಆಗುವುದಲ್ಲದೇ ನಮಗೆ ಅಸ್ತಮಾ, ಕೆಮ್ಮು, ಇತ್ಯಾದಿ ಆರೋಗ್ಯ ಸಮಸ್ಯೆಗಳು ಬರುತ್ತಿದೆ. ಹೀಗಾಗಿ ಪಟಾಕಿ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಬಾಲಕರು ಅರ್ಜಿಯಲ್ಲಿ ಮನವಿ ಮಾಡಿದ್ದರು.
Advertisement
ಆದರೆ ಪಟಾಕಿ ಅಂಗಡಿಯ ಮಾಲೀಕರು, ದೆಹಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿದರೆ ಜೀವನದ ಉದ್ಯೋಗಕ್ಕೆ ಸಮಸ್ಯೆಯಾಗುತ್ತದೆ. ಹೀಗಾಗಿ ನಿಷೇಧಗೊಳ್ಳಬಾರದು ಎಂದು ವಾದಿಸಿದ್ದರು.
Advertisement
ಬಾಲಕರು ಮತ್ತೆ ಕೋರ್ಟ್‍ಗೆ ಮನವಿ ಮಾಡಿಕೊಂಡಿದ್ದರಿಂದ ಏಕಸದಸ್ಯ ಪೀಠದ ನ್ಯಾ.ಎ.ಕೆ ಸಿಕ್ರಿ ಅವರು ಅರ್ಜಿ ವಿಚಾರಣೆ ನಡೆಸಿ ಪರಿಸರದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಅಕ್ಟೋಬರ್ 31ರ ರವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿ ಆದೇಶ ಪ್ರಕಟಿಸಿದರು.