ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಇಹಲೋಕ ತ್ಯಜಿಸಿ, ಬಾರದ ಲೋಕಕ್ಕೆ ತೆರಳಿದ್ದಾರೆ. ಇಂದು ದೆಹಲಿಯ ಲೋಧಿ ರಸ್ತೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ಕೋವಿಡ್ ಮಾರ್ಗಸೂಚಿ ಪ್ರಕಾರ ಅಂತ್ಯಸಂಸ್ಕಾರ ನೆರವೇರಲಿದೆ. ಇದನ್ನೂ ಓದಿ: ಕೈ ತಪ್ಪಿದ ಪ್ರಧಾನಿ ಹುದ್ದೆಯಿಂದ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಆಗಿದ್ದು ಹೇಗೆ?
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ಸೋಮವಾರ ನಿಧರಾಗಿದ್ದಾರೆ. ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಗೃಹ ಸಚಿವ ಅಮಿತ್ ಶಾ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ವಿದೇಶಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಶ್ರೇಷ್ಠ ವಿದ್ವಾಂಸ ಪ್ರಣಬ್ ಮುಖರ್ಜಿಯವರ ಸಲಹೆಯನ್ನು ಎಂದಿಗೂ ಮರೆಯಲ್ಲ- ಮೋದಿ
Advertisement
Advertisement
ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆಯನ್ನು ಇಂದು ದೆಹಲಿಯಲ್ಲಿಯೇ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಮೊದಲಿಗೆ ಹುಟ್ಟೂರು ಬಂಗಾಳದಲ್ಲಿಯೇ ಅಂತ್ಯಕ್ರಿಯೆ ನಡೆಸುವ ಬಗ್ಗೆ ಚರ್ಚೆಯಾಗಿತ್ತು. ಬಳಿಕ ಕುಟುಂಬ ಸದಸ್ಯರ ತೀರ್ಮಾನದಂತೆ ದೆಹಲಿಯ ಲೋಧಿ ರಸ್ತೆಯ ನಿಗಮ್ ಬೋಧ್ ಘಾಟ್‍ನಲ್ಲಿ ಪ್ರಣಬ್ ಅವರ ಅಂತ್ಯಕ್ರಿಯೆ ನಡೆಯಲಿದೆ.
Advertisement
Advertisement
ಪ್ರಣಬ್ ಅವರ ಪಾರ್ಥೀವ ಶರೀರ ದೆಹಲಿಯ ಸೇನಾ ಆಸ್ಪತ್ರೆಯಲ್ಲಿಯೇ ಇದ್ದು, ಇಂದು ಬೆಳಗ್ಗೆ 9 ಗಂಟೆಗೆ ರಾಜಾಜಿಮಾರ್ಗ್ ನಿವಾಸಕ್ಕೆ ರವಾನೆ ಮಾಡಲಾಗುತ್ತೆ. ಬೆಳಗ್ಗೆ 9.15ರಿಂದ 10.15ರವರೆಗೆ ಪಿಎಂ ಸೇರಿದಂತೆ ಹಲವು ಗಣ್ಯರಿಂದ ಅಂತಿಮ ನಮನ ಸಲ್ಲಿಸಲಾಗುತ್ತದೆ. ಬೆಳಗ್ಗೆ 10.15ರಿಂದ 11.15ರವರೆಗೆ ಇತರ ಪ್ರಮುಖ ಗಣ್ಯರಿಂದ ಅಂತಿಮ ನಮನ ಅಲ್ಲಿಸಲಾಗುತ್ತದೆ. ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಇರುವುದರಿಂದ ಗಣ್ಯರು ಹೆಚ್ಚಿನ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಆಗಮಿಸುವ ಸಾಧ್ಯತೆ ತೀರ ವಿರಳವಾಗಿದೆ.
India grieves the passing away of Bharat Ratna Pranab Mukherjee. He has left an indelible mark on the development trajectory of our nation. A scholar par excellence, a towering statesman, he was admired across the political spectrum & by all sections of society: PM Narendra Modi pic.twitter.com/3lTkvfaGN1
— ANI (@ANI) August 31, 2020
ಮಧ್ಯಾಹ್ನದ ಬಳಿಕ ಲೋಧಿ ರಸ್ತೆಯಲ್ಲಿರುವ ನಿಗಮ್ ಬೋದ್ ಘಾಟ್‍ನಲ್ಲಿ ಸುಮಾರು 2.30ಕ್ಕೆ ಅಂತಿಮ ಸಂಸ್ಕಾರ ನಡೆಯಲಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡದಿರುವ ಸಾಧ್ಯತೆ ಹೆಚ್ಚಿದೆ. ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವಾರ್ಥವಾಗಿ ಕೇಂದ್ರ ಸರ್ಕಾರ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.
Delhi: Flags at Rashtrapati Bhavan and Parliament fly at half-mast as 7-day State mourning is being observed in the country following the demise of former President #PranabMukherjee. pic.twitter.com/S9iCZciIVK
— ANI (@ANI) September 1, 2020
ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ, ಆಗಸ್ಟ್ 31 ರಿಂದ ಸೆಪ್ಟೆಂಬರ್ 6 ರವರೆಗೆ ದೇಶದಾದ್ಯಂತ ಏಳು ದಿನಗಳ ಶೋಕಾಚರಣೆಯನ್ನು ಆಚರಿಸಲಾಗುತ್ತಿದೆ. ಶೋಕಾಚರಣೆಯ ಅವಧಿಯಲ್ಲಿ, ರಾಷ್ಟ್ರಧ್ವಜವು ಎಲ್ಲಾ ಕಟ್ಟಡಗಳ ಮೇಲೆ ಅರ್ಧದಷ್ಟು ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.