ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ನಾಯಕತ್ವ ಬದಲಾವಣೆ ಹಾಗೂ ದೆಹಲಿ ಪ್ರವಾಸ ಕುರಿತಂತೆ ಆಗುತ್ತಿರುವ ಊಹಾಪೋಹಗಳ ಡಿಸಿಎಂ ಲಕ್ಷ್ಮಣ ಸವದಿ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯಿಂದ ನಿನ್ನೆ ವಾಪಸಾಗಿದ್ದ ಸವದಿ ಅವರು, ಇಂದು ಕಾವೇರಿ ನಿವಾಸದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿದರು. ಸಿಎಂ ಅವರು ಮೆಟ್ರೋ ಕಾಮಗಾರಿಯ ಕಾರ್ಯಕ್ರಮ ಚಾಲನೆ ನೀಡಲು ತೆರಳಬೇಕಿದ್ದ ಕಾರಣ ಕೇವಲ 10 ನಿಮಿಷಗಳ ಡಿಸಿಎಂ ಅವರು ಮಾತುಕತೆ ನಡೆಸಿದರು.
Advertisement
Advertisement
ಇತ್ತ ನಮ್ಮ ಮೆಟ್ರೊ ಎರಡನೇ ಹಂತದ ಸುರಂಗ ಮಾರ್ಗದ ಕಾಮಗಾರಿ ಚಾಲನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಬಗ್ಗೆ ವದಂತಿ ಹಬ್ಬಿದೆ. ಕೆಲವರು ವದಂತಿಗಳನ್ನು ಹುಟ್ಟು ಹಾಕುತ್ತಿದ್ದಾರೆ. ಆದರೆ ಗಾಳಿಸುದ್ದಿಗಳಿಗೆ ಮಹತ್ವ ಕೊಡುವ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.
Advertisement
Advertisement
ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಅವರು ಗೈರಾಗಿ ದೆಹಲಿಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕದ ಮುಂದಿನ ಸಿಎಂ ಸವದಿ ಎಂಬ ಪೋಸ್ಟ್‍ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಭಿಮಾನಿಗಳು ಭಾರೀ ಚರ್ಚೆಗೆ ಕಾರಣರಾಗಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಡಿಸಿಎಂ ಸವದಿ ಅವರು, ಮುಂದಿನ 3 ವರ್ಷ ಯಡಿಯೂರಪ್ಪ ಸಿಎಂ ಆಗಿರುತ್ತಾರೆ. ಯಾವುದೇ ಬದಲಾವಣೆ ಇಲ್ಲ. ಸಿಎಂ ಅವರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದರು.