ತಿರುವನಂತಪುರ: ಕೇರಳದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಭಾರೀ ಭೀಭತ್ಸವನ್ನೇ ಸೃಷ್ಟಿಸಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂ ಕುಸಿತ ಉಂಟಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
Advertisement
ರಣ ಪ್ರವಾಹದ ಧಾಟಿಗೆ ಕೊಟ್ಟಾಯಂ, ಇಡುಕ್ಕಿ ಜಿಲ್ಲೆಯಲ್ಲಿ ಬೆಟ್ಟ ಗುಡ್ಡಗಳು ಕುಸಿದು ಆರು ಮಂದಿ ಸಾವನ್ನಪ್ಪಿದ್ದಾರೆ. ಒರವಹದಿಂದಾಗಿ ಇಡುಕ್ಕಿಯಲ್ಲಿ ಕಾರೊಂದು ಕೊಚ್ಚಿ ಹೋಗಿ ಮಹಿಳೆಯೊಬ್ಬರು ನೀರುಪಾಲಾಗಿದ್ದಾರೆ. 12ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಅಲ್ಲದೇ ಹೆದ್ದಾರಿಗಳೆಲ್ಲಾ ಸಂಪೂರ್ಣ ಜಲಮಯವಾಗಿವೆ. ಇದನ್ನೂ ಓದಿ: ಲಖೀಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ವಜಾ ಮಾಡದಿರುವುದು ನಾಚಿಕೆಗೇಡು: ಕಾಂಗ್ರೆಸ್
Advertisement
Advertisement
ಪ್ರವಾಹದಲ್ಲಿ ಸಿಲುಕಿದ್ದ ಬಸ್ಸು ಕಾರುಗಳನ್ನು ಮೇಲಕ್ಕೆ ಎಳೆದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದಲ್ಲಿ ಹಲವಾರು ವಾಹನಗಳು ನೀರು ಪಾಲಾಗಿದೆ. ಸದ್ಯ ಜನ ನಾನಾ ಅವಸ್ಥೆ ಪಡುತ್ತಿದ್ದಾರೆ. ಅಲ್ಲದೇ ಹವಾಮಾನ ಇಲಾಖೆ ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ಪಟ್ಟಣಂತಿಟ್ಟ, ತ್ರಿಶ್ಯೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: 1 ರಿಂದ 5ನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ: ಬಿ.ಸಿ.ನಾಗೇಶ್
Advertisement
ತಿರುವನಂತಪುರ, ವಯನಾಡ್ ಸೇರಿ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಎರಡು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಪ್ರಕಟಿಸಿದೆ. ಬೆಟ್ಟಗುಡ್ಡಗಳು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳು ಜಲಮಯವಾಗಿದ್ದು, ರಕ್ಷಣಾ ಕಾರ್ಯಾಚರಣೆ ವಿಳಂಬ ಆಗುತ್ತಿದೆ. ಹೀಗಾಗಿ ಕೇರಳ ಸರ್ಕಾರ, ಐಎಎಫ್ ನೆರವು ಕೋರಿದೆ. ಇದೀಗ ಹೆಲಿಕಾಪ್ಟರ್‍ಗಳ ಮೂಲಕ ವಾಯುಪಡೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ: ಸಿಎಂ
ಕೇರಳದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಕ್ಟೋಬರ್ 19ರವರೆಗೆ ಶಬರಿಮಲೆ ಯಾತ್ರೆಗೆ ನಿಷೇಧ ಹೇರಲಾಗಿದೆ. ಅಲ್ಲದೇ ನಾಳೆಯಿಂದ ಆರಂಭವಾಗಬೇಕಿದ್ದ ಕಾಲೇಜುಗಳನ್ನು ಅಕ್ಟೋಬರ್ 20ಕ್ಕೆ ಮುಂದೂಡಲಾಗಿದೆ ಮತ್ತು ಕೇರಳ ಸ್ಥಿತಿ ಗಂಭೀರವಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿದ್ದಾರೆ.