ಯಾದಗಿರಿ: ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು, ಗರ್ಭಗುಡಿಯಲ್ಲಿದ್ದ ದೇವರ ಬೆಳ್ಳಿಯ ಮೂರ್ತಿಯನ್ನೇ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಸಂಗಮ ಗ್ರಾಮದ ಸಂಗಮೇಶ್ವರ ದೇವಸ್ಥಾನದಲ್ಲಿ ನಡೆದಿದೆ.
Advertisement
ಯಾದಗಿರಿ ಜಿಲ್ಲೆಯ ಸಂಗಮ ಗ್ರಾಮದ ಕೃಷ್ಣಾ ಮತ್ತು ಭೀಮಾ ಸಂಗಮ ನದಿ ದಡದಲ್ಲಿರುವ ಸಂಗಮೇಶ್ವರ ದೇವಸ್ಥಾನದ ಮೂರ್ತಿಯನ್ನು ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬೀಗ ಮುರಿದು ಗರ್ಭಗುಡಿಗೆ ನುಗ್ಗಿದ ಕಳ್ಳರು, ಎರಡೂವರೆ ಕೆಜಿಯ ಬೆಳ್ಳಿಯ ಮೂರ್ತಿಯನ್ನು ಕದ್ದು ಪರಾರಿ ಆಗಿದ್ದಾರೆ. ಬೆಳಗ್ಗೆ ಅರ್ಚಕರು ಪೂಜೆಗೆಂದು ಬಂದಾಗ ದೇವಸ್ಥಾನದಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಿಎಸ್‍ವೈಗೆ ಆಡಳಿತ ನಡೆಸಲು ಆಗುತ್ತಿಲ್ಲ,ಅವರ ಪುತ್ರ ಆಡಳಿತ ನಡೆಸುತ್ತಿದ್ದಾರೆ: ಶಾಸಕ ಶರಣಬಸಪ್ಪ ದರ್ಶನಾಪುರ
Advertisement
Advertisement
ಸಂಗಮೇಶ್ವರ ದೇವಸ್ಥಾನ ಕೃಷ್ಣ ಮತ್ತು ಭೀಮಾ ನದಿ ಸಂಗಮ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿತ್ತು. ಇದೀಗ ದೇವಸ್ಥಾನದ ಮೂರ್ತಿಯನ್ನೇ ಕಳ್ಳರು ಕದ್ದೊಯ್ದಿದ್ದಾರೆ. ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೂರ್ತಿ ಕದ್ದ ಕಳ್ಳರಿಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ.
Advertisement