ಯಾದಗಿರಿ: ದೇವಸ್ಥಾನಕ್ಕೆ ತೆರಳಿ ಮರಳಿ ಮನೆಗೆ ಹೋಗುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿ ಓರ್ವ ಮಹಿಳೆಯ ಸಂಬಂಧಿಕನಿಗೆ ಹಿಗ್ಗಾಮುಗ್ಗಾ ಥಳಿಸಿ, ಬಳಿಕ ಮಹಿಳೆಯನ್ನು ಹೊತ್ತೊಯ್ದು ಗ್ಯಾಂಗ್ ರೇಪ್ ಮಾಡಿರುವ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಗಸ್ಟ್ 8ರ ಮಧ್ಯರಾತ್ರಿಯಿಂದ ಆಗಸ್ಟ್ 9ರ ಬೆಳಗಿನ ಜಾವದ ಅವಧಿಯಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಒಳಗಾದದ ಮಹಿಳೆ ಮತ್ತು ಆಕೆಯ ಸಂಬಂಧಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಮಹಿಳೆ ಮತ್ತು ಆಕೆಯ ಸಂಬಂಧಿ ದೇವಸ್ಥಾನಕ್ಕೆ ತೆರಳಿ ತಡರಾತ್ರಿ ಮನೆಗೆ ವಾಪಸಾಗುತ್ತಿದ್ದರು. ಇದನ್ನು ಗಮನಿಸಿದ ಮದ್ಯದ ಅಮಲಿನಲ್ಲಿದ್ದ ಇಬ್ಬರು ಕಾಮುಕ ಯುವಕರು, ಈ ಇಬ್ಬರನ್ನು ಆಟೋದಲ್ಲಿ ಫಾಲೋ ಮಾಡಿ ಯಾದಗಿರಿ ಶಹಾಪುರ ಮಾರ್ಗ ಮಧ್ಯದಲ್ಲಿ ಬೈಕ್‍ಗೆ ಅಡ್ಡ ಹಾಕಿದ್ದಾರೆ. ನಂತರ ಮಹಿಳೆಯ ಸಂಬಂಧಿಗೆ ಥಳಿಸಿ ಮಹಿಳೆಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ್ದಾರೆ.
ಸದ್ಯ ಇಬ್ಬರು ಕಾಮುಕರನ್ನು ಶಹಾಪೂರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ಕೃತ್ಯಕ್ಕೆ ಬಳಸಿದ ಆಟೋವನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ