– 24 ಗಂಟೆಯಲ್ಲಿ 384 ಜನರ ಸಾವು
ನವದೆಹಲಿ: ದೇಶದಲ್ಲಿ ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಕಳೆದ ಕೆಲ ದಿನಗಳಿಂದ ನಿತ್ಯವೂ ದಾಖಲೆಯ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂದು ಕೂಡ 18,552 ಮಂದಿಗೆ ಕೊರೊನಾ ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 18,552 ಮಂದಿಗೆ ಸೋಂಕು ಪತ್ತೆಯಾಗಿದ್ದು, 384 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷದ ಗಡಿ ದಾಟಿದರೆ, ಮೃತರ ಸಂಖ್ಯೆ 15,600ಕ್ಕೂ ಅಧಿಕವಾಗಿದೆ.
Advertisement
Advertisement
ದೇಶದಲ್ಲಿ ಈವರೆಗೂ ಒಟ್ಟು 5,08,953 ಮಂದಿಗೆ ಸೋಂಕು ದೃಢಪಟ್ಟಿದ್ದು, ಸಾವಿನ ಸಂಖ್ಯೆ 15,685 ಕ್ಕೆ ಏರಿದೆ. ಒಟ್ಟು ಪ್ರಕರಣಗಳಲ್ಲಿ 2,95,879 ಜನರಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ 1,97,387 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಮಹಾರಾಷ್ಟ್ರದಲ್ಲಿ ಕೋವಿಡ್-19 ಭಾರೀ ಪ್ರಮಾಣದಲ್ಲಿ ಹರಡಿದ್ದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಮಹಾರಾಷ್ಟ್ರ ದೇಶದಲ್ಲಿಯೇ ಹೆಚ್ಚು 1,52,765 ಮಂದಿಗೆ ಕೋವಿಡ್-19 ಪತ್ತೆಯಾಗಿದೆ. ಜೊತೆಗೆ 7,106 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
Advertisement
India crosses 5 lakh mark as it reports highest single-day spike of 18552 new #COVID19 cases; 384 deaths in last 24 hours. Positive cases in India stand at 508953 including 197387 active cases, 295881 cured/discharged/migrated & 15685 deaths: Ministry of Health & Family Welfare pic.twitter.com/PqW6FzDz3x
— ANI (@ANI) June 27, 2020
ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ದೆಹಲಿ ಎರಡನೇ ಸ್ಥಾನದಲ್ಲಿದೆ. ಅಲ್ಲಿ 77,240 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, 2,492 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 74,622 ಜನರಿಗೆ ಸೋಂಕು ದೃಢಪಟ್ಟಿದ್ದು, 957 ಸಾವನ್ನಪ್ಪಿದ್ದಾರೆ.