ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ರೌದ್ರನರ್ತನ ತೋರುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.
ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2,67,334 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಮೂಲಕ ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 4529 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಇದುವರೆಗೆ 2,83,248 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
Advertisement
India reports 2,67,334 new #COVID19 cases, 3,89,851 discharges & 4529 deaths (highest in a single day) in last 24 hrs, as per Health Ministry.
Total cases: 2,54,96,330
Total discharges: 2,19,86,363
Death toll: 2,83,248
Active cases: 32,26,719
Total vaccination: 18,58,09,302 pic.twitter.com/iXabFEM0M5
— ANI (@ANI) May 19, 2021
Advertisement
ಸದ್ಯ ದೇಶದಲ್ಲಿ 32,26,719 ಸಕ್ರಿಯ ಪ್ರಕರಣಗಳಿವೆ. 2,19,86,363 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18,58,09,302 ಮಂದಿ ಮುಂಜಾಗ್ರತಾ ಕ್ರಮವಾಗಿ ವಾಕ್ಸಿನ್ ಪಡೆದುಕೊಂಡಿದ್ದಾರೆ.
Advertisement
ದೇಶದಲ್ಲಿ ನಿನ್ನೆ ಒಂದೇ ದಿನ 20,08,296 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 32,03,01,177 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
Advertisement
32,03,01,177 samples tested for #COVID19 up to 18th May 2021. Of these, 20,08,296 samples were tested yesterday: Indian Council of Medical Research (ICMR) pic.twitter.com/b0jde9TboK
— ANI (@ANI) May 19, 2021