ನವದೆಹಲಿ: ದೇಶದಲ್ಲಿ ಕೊರೊನಾ ಸ್ಫೋಟವಾಗಿದ್ದು, ಕಳೆದ 24 ಗಂಟೆಯಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 1,038 ಜನರನ್ನು ಕೊರೊನಾ ಆಹುತಿ ಪಡೆದುಕೊಂಡಿದೆ.
ಸದ್ಯ ದೇಶದಲ್ಲಿ 14,71,877 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದ ಗುಣಮುಖರಾಗಿ 93,528 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 1,73,123 ಜನರು ಸಾವನ್ನಪ್ಪಿದ್ರೆ, ಕೊರೊನಾ ಪ್ರಕರಣಗಳ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ಒಟ್ಟು 11,44,93,238 ಜನ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.
Advertisement
Advertisement
ದೇಶದ ಒಟ್ಟು ಪ್ರಕರಣಗಳ ಪೈಕಿ ಶೇ.10 ರಷ್ಟು ವರದಿಗಳು 10 ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್ಗಡ, ದೆಹಲಿ, ಮಧ್ಯ ಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಮತ್ತು ರಾಜಸ್ಥಾನಗಳಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ವರದಿಯಾಗಿವೆ.
Advertisement
India reports 2,00,739 new #COVID19 cases, 93,528 discharges and 1,038 deaths in the last 24 hours, as per Union Health Ministry
Total cases: 1,40,74,564
Total recoveries: 1,24,29,564
Active cases: 14,71,877
Death toll: 1,73,123
Total vaccination: 11,44,93,238 pic.twitter.com/B5quloIUjH
— ANI (@ANI) April 15, 2021
Advertisement
ರಾಜ್ಯದಲ್ಲಿ ನಿನ್ನೆ ಬರೋಬ್ಬರಿ 11,265 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದಿನದ ಸೋಂಕಿತರ ಸಂಖ್ಯೆ 11 ಸಾವಿರದ ಗಡಿ ದಾಟಿದಂತಾಗಿದೆ. ಇಂದು 38 ಜನ ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ 8,155 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 85,480ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,94,912ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು 4,364 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 9,96,367 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.