ದೇಶದಲ್ಲಿ ಪ್ರತಿ ಗಂಟೆಗೆ 2,403 ಮಕ್ಕಳ ಜನನ, ಜನಸಂಖ್ಯಾ ಸ್ಫೋಟದ ಬಗ್ಗೆ ಜಾಗೃತಿ ಅಗತ್ಯ: ಹಾವೇರಿ ಡಿಸಿ

Public TV
1 Min Read
hvr dc

ಹಾವೇರಿ: ಜನಸಂಖ್ಯಾ ಸ್ಫೋಟದಿಂದ ಉಂಟಾಗುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ಹೇಳಿದರು.

ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಪೂರ್ವಭಾವಿಯಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಚಾರ ವಾಹನಕ್ಕೆ ಚಾಲನೆ ನೀಡಿ, ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿ ಮಾತನಾಡಿದರು.

hvr dc 2 medium

ದೇಶದಲ್ಲಿ ಪ್ರತಿ ನಿಮಿಷಕ್ಕೆ ಸರಾಸರಿ 40, ಪ್ರತಿ ಗಂಟೆಗೆ 2,403, ಪ್ರತಿ ದಿನಕ್ಕೆ 57,685 ಹಾಗೂ ಪ್ರತಿ ತಿಂಗಳು 13,84,457 ಮಕ್ಕಳ ಜನನವಾಗುತ್ತದೆ. ಜನಸಂಖ್ಯಾ ಸ್ಫೋಟದಿಂದ ಆಹಾರ, ನೀರು, ಬಟ್ಟೆ, ವಸತಿ ಹಾಗೂ ಖಜನಿಗಳ ಕೊರತೆ ಉಂಟಾಗುವುದರ ಜೊತೆಗೆ ಶಿಕ್ಷಣ, ಆರೋಗ್ಯ ಸೇವೆಗಳು ಇತರೆ ಸಂಪನ್ಮೂಲಗಳ ಕೊರತೆಯು ಉಂಟಾಗುತ್ತದೆ. ವಾಯು, ಜಲ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುವುದರ ಜೊತೆಗೆ ಸಾಮಾಜಿಕ ಅಸಮಾನತೆ ತಲೆದೊರುತ್ತದೆ ಎಂದರು.

ಜನಸಂಖ್ಯಾ ಹತೋಟಿಗೆ ಮುಂಜಾಗ್ರತಾ ಕ್ರಮವಾಗಿ ಯುವಕರಿಗೆ 21 ವರ್ಷ ಹಾಗೂ ಯುವತಿಯರಿಗೆ 18 ವರ್ಷದ ನಂತರ ಮದುವೆ ಮಾಡಬೇಕು. ವಿವಾಹದ ನಂತರ ದಂಪತಿ ಕುಟುಂಬ ಕಲ್ಯಾಣದ ವಿಧಾನಗಳನ್ನು ಅನುನಸರಿಸಿಕೊಂಡು ಚಿಕ್ಕ ಕುಟುಂಬಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

2 child india population policy main

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಇತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *