-ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿದೆ
ನವದೆಹಲಿ: ಕೇಂದ್ರ ಸರ್ಕಾರ ದೇಶದ ಜನರ ಧ್ವನಿಯನ್ನ ಅಡಗಿಸುವ ನಡೆಸುತ್ತಿದೆ. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಅಪಾಯದಲ್ಲಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕೇಂದ್ರದ ವಿರುದ್ಧ ಗುಡುಗಿದ್ದಾರೆ.
ನಮ್ಮ ಹಿರಿಯರು ದೇಶ ಈ ರೀತಿಯ ಸಂಕಷ್ಟದಲ್ಲಿ ಸಿಲುಕಿಕೊಳ್ಳುತ್ತೆ ಎಂದೂ ಊಹಿಸರಿಲಿಲ್ಲ. ಅಧಿಕಾರದಲ್ಲಿರುವವರು ಜನರಲ್ಲಿ ದ್ವೇಷದ ಭಾವನೆ ಹುಟ್ಟಿಕೊಳ್ಳುವಂತೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವವನ್ನ ನಾಶ ಮಾಡಲಾಗುತ್ತಿದೆ. ಅವರು ನಮ್ಮ ದೇಶದ ಜನರು, ಆದಿವಾಸಿಗಳು, ಮಹಿಳೆಯರು, ಯುವ ಜನಾಂಕ ತಮ್ಮ ವಿರುದ್ಧ ಧ್ವನಿ ಎತ್ತಬಾರದು ಎಂದು ಇಷ್ಟಪಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾತ್ಮ ಗಾಂಧೀಜಿ, ಜವಹಾರಲಾಲ್ ನೆಹರೂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಹಲವು ಮಹಾಪುರುಷರು ದೇಶ ಸ್ವತಂತ್ರ ಪಡೆದ 75ನೇ ವರ್ಷದಲ್ಲಿ ಈ ರೀತಿಯ ಕಷ್ಟಗಳನ್ನು ಎದುರಿಸುತ್ತೆ ಎಂದು ಊಹಿಸಿರಲಿಕ್ಕಿಲ್ಲ. ನಮ್ಮ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಅಪಾಯದಲ್ಲಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖಿಸದೇ ಪರೋಕ್ಷವಾಗಿ ಕೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.