– ಒಂದೇ ಕ್ಲಿಕ್‌ನಲ್ಲಿ ಸಿಗಲಿದೆ ರೋಗಿಯ ಸಂಪೂರ್ಣ ಆರೋಗ್ಯ ಮಾಹಿತಿ
– ಎನ್‌ಡಿಎಚ್‌ಎಂ ಆರಂಭಿಸಲು ಸರ್ಕಾರ ಸಿದ್ಧತೆ
– ಎಲ್ಲ ಪ್ರಜೆಗಳಿಗೆ ಕಾರ್ಡ್ ಕಡ್ಡಾಯವಲ್ಲ
ನವದೆಹಲಿ: ಆಸ್ಪತ್ರೆಗೆ ಅಡ್ಮಿಟ್ ಆಗಿರುವ ರೋಗಿಗೆ ಈ ಹಿಂದೆ ಎಲ್ಲಿ ಚಿಕಿತ್ಸೆ ನೀಡಲಾಗಿತ್ತು? ಏನು ಚಿಕಿತ್ಸೆ ನೀಡಲಾಗಿತ್ತು? ಆ ಸಮಯದಲ್ಲಿ ರೋಗಿಯ ಆರೋಗ್ಯ ಹೇಗಿತ್ತು? ಯಾವ ಕಾರಣಕ್ಕೆ ಏನು ಪರೀಕ್ಷೆ ಮಾಡಿಸಲಾಗಿತ್ತು ಎಲ್ಲವೂ ಒಂದೇ ಕ್ಲಿಕ್ ನಲ್ಲಿ ಸಿಗಲಿದೆ.
ಹೌದು, ಕೇಂದ್ರ ಸರ್ಕಾರ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್(ಎನ್‌ಡಿಎಚ್‌ಎಂ) ಆರಂಭಿಸಲು ಮುಂದಾಗಿದೆ. ಈ ಸೇವೆ ಆರಂಭಗೊಂಡರೆ ದೇಶದ ಪ್ರತಿಯೊಬ್ಬ ಪ್ರಜೆಗೆ ಆರೋಗ್ಯ ಐಡಿ ಕಾರ್ಡ್ ಸಿಗಲಿದೆ. ಇದನ್ನೂ ಓದಿ:ಮರಣ ಪ್ರಮಾಣ ಇಳಿಕೆ- 4 ತಿಂಗಳ ಬಳಿಕ ವೆಂಟಿಲೇಟರ್ ರಫ್ತಿಗೆ ಅನುಮತಿ
Advertisement
Advertisement
Advertisement
ಈಗಾಗಲೇ ಪ್ರಸ್ತಾಪ ಸಿದ್ಧಗೊಂಡಿದ್ದು, ಈ ವಾರವೇ ಕ್ಯಾಬಿನೆಟ್ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿುವರು ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ಈ ಐಡಿ ಕಾರ್ಡ್ ಎಲ್ಲರಿಗೂ ಕಡ್ಡಾಯವಲ್ಲ. ಜನರು ಸ್ವಇಚ್ಛೆಯಿಂದ ಕಾರ್ಡ್ ಮಾಡಿಸಬಹುದು. ಆರಂಭದಲ್ಲಿ ಹೆಲ್ತ್ ಐಡಿ, ವೈಯಕ್ತಿಕ ಆರೋಗ್ಯ ಮಾಹಿತಿ, ಡಿಜಿ ಡಾಕ್ಟರ್ ಮತ್ತು ಹೆಲ್ತ್ ರಿಜಿಸ್ಟ್ರಿ ಇರಲಿದೆ. ನಂತರದ ದಿನಗಳಲ್ಲಿ ಇ ಫಾರ್ಮಾಸಿ ಮತ್ತು ಟೆಲಿಮೆಡಿಸಿನ್ ಸೇವೆಗಳನ್ನು ಸೇರಿಸಲಾಗುತ್ತದೆ. ಈಗಾಗಲೇ ಹಲವು ದೇಶಗಳಲ್ಲಿ ಸರ್ಕಾರವೇ ಈ ರೀತಿಯ ಆರೋಗ್ಯ ಕಾರ್ಡ್‌ಗಳನ್ನು ನೀಡಿವೆ.
ಕೆಲಸ ಹೇಗೆ?
ಈ ಸೇವೆ ಬೇಕಾದವರು ವೆಬ್‌ಸೈಟ್/ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು ವಿವರಗಳನ್ನು ನೀಡಬೇಕಾಗುತ್ತದೆ. ಈ ವಿವರಗಳನ್ನು ಆ ವ್ಯಕ್ತಿ ಶೇರ್ ಮಾಡಿದರೆ ಮಾತ್ರ ಉಳಿದವರಿಗೆ ಸಿಗುತ್ತದೆ. ಹಣಕಾಸು ಸಚಿವಾಲಯ ಈ ಪ್ರಸ್ತಾಪಕ್ಕೆ 470 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಎನ್‌ಎಚ್‌ಎಯಲ್ಲಿ ಅಂತಿಮಗೊಂಡ ಬಳಿಕ ಈ ಪ್ರಸ್ತಾಪ 400 ಕೋಟಿ ರೂ. ಗಿಂತ ಜಾಸ್ತಿ ಆಗಲಾರದು ಎಂದು ವರದಿಯಾಗಿದೆ.
ಲಾಭ ಹೇಗೆ?
ಈ ಸೇವೆ ದೇಶವ್ಯಾಪಿ ಇರಲಿದೆ. ವ್ಯಕ್ತಿ ಯಾವುದೇ ಮೂಲೆಗೆ ಹೋದಾಗ ಸಮಸ್ಯೆಯಾಗಿ ಆಸ್ಪತ್ರೆ ಸೇರಿದಾಗ ಆತನ ಆರೋಗ್ಯದ ಮಾಹಿತಿ ಕೂಡಲೇ ಸಿಗುವುದಿಲ್ಲ. ಆದರೆ ಈ ಆಪ್‌ನಲ್ಲಿ ವಿವರ ನೀಡಿದ್ದರೆ ಕೂಡಲೇ ವೈದ್ಯರಿಗೆ ಈ ಹಿಂದೆ ರೋಗಿಗೆ ಏನಾಗಿತ್ತು? ಯಾವ ಕಾರಣಕ್ಕೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು? ಈ ಹಿಂದೆ ಎಲ್ಲಿ ಚಿಕಿತ್ಸೆ ನೀಡಲಾಗಿತ್ತು ಈ ಎಲ್ಲ ವಿವರಗಳು ಕೂಡಲೇ ಸಿಗಲಿದೆ. ಇದರಿಂದಾಗಿ ಕಡಿಮೆ ಅವಧಿಯಲ್ಲಿ ರೋಗಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ.