ಭುವನೇಶ್ವರ: ದೇಶದ ಎಲ್ಲ ವಾಸಿಗಳಿಗೂ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.
ಭಾನುವಾರ ಓಡಿಶಾದ ಬಾಲಸೋರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದ ಪಕ್ಷದ ಸಭೆಯಲ್ಲಿ ಪ್ರತಾಪ್ ಸಾರಂಗಿ ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಈಗಾಗಲೇ ಪ್ರಧಾನ ಮಂತ್ರಿಗಳು ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಹೇಳಿದ್ದಾರೆ. ಹಾಗಾಗಿ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ವ್ಯಾಕ್ಸಿನ್ ಗೆ ಅಂದಾಜು 500 ರೂ. ತಗಲಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರ ಜನತೆಗೆ ಉಚಿತ ಕೊರೊನಾ ವ್ಯಾಕ್ಸಿನ್ – ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ
Advertisement
Advertisement
ಓಡಿಶಾದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಆರ್ಪಿ ಸ್ವೈನ್, ಕೇಂದ್ರ ಸರ್ಕಾರ ಕೊರೊನಾ ವ್ಯಾಕ್ಸಿನ್ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಬಿಹಾರ ಚುನಾವಣೆಯಲ್ಲಿಯೂ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಹಾಗಾಗಿ ಓಡಿಶಾದವರು ಆಗಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಪ್ರತಾಪ್ ಸಾರಂಗಿ ಜನರ ಬಳಿ ಕ್ಷಮೆ ಕೇಳಬೇಕು. ಓಡಿಶಾದಲ್ಲಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಬಿಜೆಪಿಯ ನಿಲುವು ಏನು ಎಂಬುದನ್ನ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದರು. ಇದನ್ನೂ ಓದಿ: ಡಿಸಿಜಿಐ ಶೋಕಾಸ್ ನೋಟಿಸ್ – ಕೊರೊನಾ ವ್ಯಾಕ್ಸಿನ್ ಪ್ರಯೋಗ ನಿಲ್ಲಿಸಿದ ಸೆರಮ್
Advertisement
Advertisement
ತಮಿಳುನಾಡು, ಮಧ್ಯ ಪ್ರದೇಶ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ರಾಜಕೀಯ ಮೇಲಾಟಗಳು ಆರಂಭಗೊಂಡಿವೆ. ಚುನಾವಣೆಯಲ್ಲಿ ಗೆದ್ದರೆ ಉಚಿತ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ರಾಜಕೀಯ ಪಕ್ಷಗಳು ಆಶ್ವಾಸನೆಗಳನ್ನ ನೀಡುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೇಶದ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಎಲ್ಲಿಯವರೆಗೂ ಮದ್ದಿಲ್ಲ, ಅಲ್ಲಿಯವರೆಗೂ ಕೊರೊನಾ ಬಗ್ಗೆ ಮೈಮರೆಯಬೇಡಿ : ಪ್ರಧಾನಿ ಮೋದಿ