ಬೆಂಗಳೂರು: 103 ವರ್ಷದ ವೃದ್ಧೆಯೊಬ್ಬರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.
ಜೆ.ಕಾಮೇಶ್ವರಿ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವ ಮೂಲಕ ಕೋವಿಡ್ 19 ಲಸಿಕೆ ಪಡೆದ ಭಾರತದ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
- Advertisement 2
- Advertisement 3
ರಾಷ್ಟ್ರಾದ್ಯಂತ ಕೋವಿಡ್-19 ಲಸಿಕೆಯನ್ನು 2.40 ಕೋಟಿ ಮಂದಿಗೆ ನೀಡಲಾಗಿದೆ ಎಂದು ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಅಲ್ಲದೆ ಮಾರ್ಚ್ 1 ರಿಂದ ಸಾರ್ವಜನಿಕರಿಗೆ ಲಸಿಕೆ ವಿತರಣೆ ಆರಂಭಿಸುತ್ತಿದ್ದಂತೆ ಕೇಂದ್ರ ಸರ್ಕಾರ ರಾಜ್ಯಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ಗಳ ಸಂಖ್ಯೆಯನ್ನು ಇದೀಗ ಹೆಚ್ಚಿಸುತ್ತಿದೆ.
- Advertisement 4
ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟು ರೋಗದಿಂದ ಬಳಲುತ್ತಿರುವ ಮಂದಿ ಲಸಿಕೆ ಪಡೆಯಬಹುದಾಗಿದೆ.