ನವದೆಹಲಿ: ಕೇಂದ್ರ ಸರ್ಕಾರ ಮತ್ತೇ ದೇಶವ್ಯಾಪಿ ಲಾಕ್‍ಡೌನ್ ಮಾಡುವ ಚಿಂತನೆ ಮಾಡಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದೇಶವ್ಯಾಪಿ ಲಾಕ್‍ಡೌನ್ ಮಾಡುವ ಚಿಂತನೆ ಇಲ್ಲ. ಲಾಕ್‍ಡೌನ್ ಬದಲಾಗಿ ಸಣ್ಣ ಕಂಟೈನ್‍ಮೆಂಟ್ ಝೋನ್‍ಗಳನ್ನ ಮಾಡುವುದರ ಮೇಲೆ ಗಮನಹರಿಸಲಾಗುತ್ತದೆ. ಸೋಂಕು ನಿಯಂತ್ರಣಕ್ಕೆ ಅಗತ್ಯ ಇರುವ ಕ್ರಮವನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.
ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್ ಸೂಕ್ಷ್ಮ, ಸಣ್ಣ ಮಧ್ಯ ಉದ್ದಿಮೆಗಳ(ಎಫ್‍ಐಎಸ್‍ಎಮ್‍ಈ) ಅಧ್ಯಕ್ಷ ಅನಿಮೇಶ್ ಸಕ್ಸೇನಾರೊಂದಿಗೆ ಮಾತಕತೆ ನಡೆಸಿದ್ದಾರೆ. ರಾಷ್ಟ್ರಾದ್ಯಂತ ಲಾಕ್‍ಡೌನ್ ಮಾಡುವ ಯೋಜನೆ ಇಲ್ಲ ಎಂದು ಉದ್ಯಮ ಕ್ಷೇತ್ರಕ್ಕೆ ಭರವಸೆ ನೀಡಿದ್ದಾರೆ.
ಪ್ರಧಾನ ಮತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಆಕ್ಸಿಜನ್ ಲಭ್ಯತೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನ ಅವಲೋಕಿಸುತ್ತಿದ್ದಾರೆ ಎಂದು ಅನಿಮೇಶ್ ಸಕ್ಸೇನಾ ಅವರು ಹೇಳಿದ್ದಾರೆ.