ಬೆಂಗಳೂರು: ರೆಗ್ಯೂಲರ್ ಸ್ಟೂಡೆಂಟ್ಸ್ ಗಳನ್ನು ಸಾರ್ವತ್ರಿಕವಾಗಿ ಪಾಸ್ ಮಾಡುತ್ತೇವೆ ಎಂದು ಸರ್ಕಾರ ಆದೇಶ ನೀಡಿದ ಬೆನ್ನಲ್ಲೆ ರಿಪಿಟರ್ಸ್ ವಿದ್ಯಾರ್ಥಿಗಳು ಕೂಡ ನಮ್ಮನ್ನೂ ಪಾಸ್ ಮಾಡಿ ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಡದಂತೆ ಹೈಕೋರ್ಟ್ ತಡೆ ಹಿಡಿದಿದೆ.
Advertisement
ಹೌದು, ಕಳೆದ ವಾರ ರಿಪಿಟರ್ಸ್ ವಿಧ್ಯಾರ್ಥಿಗಳು ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚನೆ ನೀಡಿತ್ತು. ಇಂದು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರ ತಮ್ಮ ನಿಲುವನ್ನು ತಿಳಿಸಿ ಈಗಾಗಲೇ 12 ತಜ್ಞರ ಸಮಿತಿ ರಚಿಸಿರುವುದಾಗಿ ಹೈಕೋರ್ಟಿಗೆ ಮಾಹಿತಿ ನೀಡಿದೆ. ಇದನ್ನೂ ಓದಿ: ಜೂನ್ 22ರಿಂದ ಮಂತ್ರಾಲಯದ ರಾಯರ ದರ್ಶನಕ್ಕೆ ಅವಕಾಶ
Advertisement
Advertisement
76 ಸಾವಿರ ರಿಪೀಟರ್ಸ್‍ಗಳ ಫಲಿತಾಂಶದ ಬಗ್ಗೆ ತೀರ್ಮಾನ ಮಾಡಲಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಪರೀಕ್ಷಾ ವಿಭಾಗದ ಜಂಟಿ ನಿರ್ದೇಶಕ ಕೃಷ್ಣಪ್ಪ ಹೈಕೋರ್ಟಿಗೆ ಮಾಹಿತಿ ರವಾನೆ ಮಾಡಿದರು.
Advertisement
ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ, ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ. ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ತಿಳಿಸಿತ್ತು. ಅಲ್ಲದೇ ವಿಚಾರಣೆ ಜುಲೈ 5 ಕ್ಕೆ ಮುಂದೂಡಿ ಸರ್ಕಾರದ ನಿಲುವು ತಿಳಿಸಲು ಸೂಚನೆ ನೀಡಿದೆ. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್