ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಇಲ್ಲದೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕಗಳನ್ನು ಮಾತ್ರ ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಕೊಟ್ಟಿರುವ ಸಲಹೆ ಬಗ್ಗೆ ಸದ್ಯದಲ್ಲೇ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು.
ಸುರೇಶ್ ಕುಮಾರ್ ಅವರು ಉತ್ತಮ ಸಲಹೆ ನೀಡಿದ್ದಾರೆ. ಎಂಜಿನಿಯರಿಂಗ್ & ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಇಂತಿಷ್ಟು ಅಂಕಗಳನ್ನು ಪಡೆಯಬೇಕಾಗಿತ್ತು. ಈಗ ಆ ಅಂಕ ಪರಿಗಣಿಸುವ ಬದಲು ಸಿಇಟಿ Rank ಪರಿಗಣಿಸುವ ಸಲಹೆಯನ್ನು ಅವರು ನೀಡಿದ್ದಾರೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು, ಉನ್ನತ ಶಿಕ್ಷಣ ತಜ್ಞರ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಮೃಗಾಲಯಗಳನ್ನು ಉಳಿಸಿ ಬೆಳೆಸಿ, ಪ್ರಾಣಿಗಳನ್ನು ದತ್ತು ಪಡೆಯಿರಿ: ದರ್ಶನ್ ಮನವಿ
Advertisement
Advertisement
ಅಲ್ಲದೆ, ಈ ಬದಲಾವಣೆ ಮಾಡಬೇಕಾದರೆ ಕಾಯ್ದೆಯ ತಿದ್ದುಪಡಿಯನ್ನೂ ಮಾಡಬೇಕು. ಈ ಬಗ್ಗೆ ಕಾನೂನು ತಜ್ಞರು ಹಾಗೂ ಮುಖ್ಯಮಂತ್ರಿಗಳ ಜತೆಯೂ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.