ಬೆಂಗಳೂರು: ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಬೃಹತ್ ಓವರ್ ಹೆಡ್ ಟ್ಯಾಂಕ್ ನೆಲಸಮವಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬಿದಲೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಬಿದಲೂರು ಗ್ರಾಮದಲ್ಲಿ 2013-14ನೇ ಸಾಲಿನಲ್ಲಿ ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ನಿರ್ಮಾಣವಾದ ಟ್ಯಾಂಕ್ ಇದಾಗಿದೆ. ಕಳೆದ ಐದು ವರ್ಷಗಳ ಹಿಂದೆ ಟ್ಯಾಂಕ್ ನಿರ್ಮಾಣವಾಗಿತ್ತು. ಆದರೆ ದಿಢೀರನೇ ವಾಟರ್ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಕಳಪೆ ಕಾಮಗಾರಿ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಡೀ ಗ್ರಾಮಕ್ಕೆ ನಿರುಣಿಸುತ್ತಿದ್ದ ಓವರ್ ಹೆಡ್ ಟ್ಯಾಂಕ್ ಇದ್ದಾಗಿತ್ತು. ಸುಮಾರು 50 ಸಾವಿರ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ಇದೀಗ ಉರುಳಿಬಿದ್ದಿದೆ. ಇದರಿಂದ ಗ್ರಾಮಕ್ಕೆ ನೀರಿನ ಅಭಾವ ಉಂಟಾಗಿದೆ. ಬಿದಲೂರು ಗ್ರಾಮ ಪಂಚಾಯತಿ ಸದಸ್ಯ ರವಿಕುಮಾರ್ ಕಾಮಗಾರಿ ಗುತ್ತಿಗೆ ನಡೆಸಿದ್ದರು ಎನ್ನಲಾಗಿದೆ.
ಒಂದೆಡೆ ಬೇಸಿಗೆ, ಮತ್ತೊಂದೆಡೆ ಕೊರೊನಾ ವೈರಸ್ ಲಾಕ್‍ಡೌನ್‍ನಿಂದ ಜನರು ಪರಿತಪ್ಪಿಸುವಂತಾಗಿದೆ. ಕೂಡಲೇ ಅಧಿಕಾರಿಗಳು ಗ್ರಾಮಕ್ಕೆ ನೀರಿನ ಸಮಸ್ಯೆ ಬಗ್ಗೆ ಗಮನಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.