– ರಕ್ಷಣೆಯ ವೀಡಿಯೋ ವೈರಲ್
ಹಾಸನ: ಚಾಲಕನ ನಿಂಯತ್ರಣ ತಪ್ಪಿ ಕಾರು ಉರುಳಿ ಬಿದ್ದು ಓರ್ವ ಮೃತಪಟ್ಟ ಘಟನೆ ಹಾಸನ ಚನ್ನರಾಯಪಟ್ಟಣ ತಾಲೂಕಿನ ಗಂಡಸಿ ಹ್ಯಾಂಡ್‍ಪೋಸ್ಟ್ ಬಳಿ ನಡೆದಿದೆ.
ಕಾರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಚಲಿಸುತ್ತಿತ್ತು. ಕಾರಿನಲ್ಲಿದ್ದರು ಮಂಜುನಾಥನ ಸನ್ನಧಿಗೆ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿದೆ. ಐವರಲ್ಲಿ ಓರ್ವ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ 5:30 ರ ಸುಮಾರಿಗೆ ಹಾಸನ ಮಾರ್ಗವಾಗಿ ಧರ್ಮಸ್ಥಳಕ್ಕೆ ಐವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಉರುಳಿ ಬಿದ್ದಿದೆ. ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಂಬುಲೆನ್ಸ್‍ಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆಸ್ಪತ್ರೆ ಸಿಬ್ಬಂದಿ ಮತ್ತು ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ಮತ್ತು ಆಸ್ಪತ್ರೆ ಸಿಬ್ಬಂದಿ ಸೇರಿ ರಕ್ಷಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.