ಚಾಮರಾಜನಗರ: ಸಿಎಂ ಯಡಿಯೂರಪ್ಪ ಪರ ಮಠಾಧೀಶರ ಬ್ಯಾಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ. ಪ್ರತಿಯೊಬ್ಬರಿಗು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ, ವಾಕ್ ಸ್ವಾತಂತ್ರ್ಯ ಇದೆ, ಮಠಾಧೀಶರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
Advertisement
ಚಾಮರಾಜನಗರ ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸ್ಪಷ್ಡಪಡಿಸಿದ್ದಾರೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಮೂಲಿಯಂತೆ ಪಕ್ಷದ ಆಗು ಹೋಗುಗಳು ಹಾಗು ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಬಿಜೆಪಿಗೆ ಬಂದಿದ್ದಕ್ಕೆ ಈಶ್ವರಪ್ಪ ಮಿನಿಸ್ಟರ್ ಆಗಿದ್ದು: ಬಿ.ಸಿ.ಪಾಟೀಲ್ ತಿರುಗೇಟು
Advertisement
Advertisement
ಮುಖ್ಯಮಂತ್ರಿ ಬದಲಾವಣೆ ವಿಚಾರ ಸಂಪೂರ್ಣ ಸುಳ್ಳು, ಮುಂದಿನ ಎರಡು ವರ್ಷ ಕಾಲ ಯಡಿಯೂರಪ್ಪ ನವರೇ ಸಿಎಂ ಆಗಿರುತ್ತಾರೆ. ನಾನೇ ಮುಂದಿನ ಸಿಎಂ ಎಂದು ಯತ್ನಾಳ್ ಎಲ್ಲಾ ಶಾಸಕರಿಗೆ ಫೋನ್ ಮಾಡಿ ಬೆಂಬಲ ಕೋರುತ್ತಿದ್ದಾರೆಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೆ ಯಾರಿಂದಲೂ ಯಾವುದೇ ಫೋನ್ ಬಂದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ
Advertisement
ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆhttps://t.co/A1YRSVwQtD#RVDeshpande #KSEshwarappa #BJP #Congress #KannadaNews @RV_Deshpande @ikseshwarappa @bcpatilkourava @BJP4Karnataka @INCKarnataka
— PublicTV (@publictvnews) June 15, 2021