ಧಾರವಾಡ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಗುಣಮುಖರಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದು, ಕೊರೊನಾ ಸೋಂಕು ದೃಢಪಟ್ಟಿದ್ದ ಹುಬ್ಬಳ್ಳಿಯ ಮುಲ್ಲಾ ಓಣಿಯ 30 ವರ್ಷದ ಮಹಿಳೆ ರೋಗಿ ನಂ.430 ಹಾಗೂ ಆಝಾದ್ ಕಾಲೋನಿಯ 13 ವರ್ಷದ ಬಾಲಕಿ ರೋಗಿ ನಂ.431 ಸಂಪೂರ್ಣ ಗುಣಮುಖರಾಗಿದ್ದಾರೆ.
Advertisement
Advertisement
ಇವರಿಬ್ಬರನ್ನು 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಈ ಇಬ್ಬರಿಗೆ ಹುಬ್ಬಳ್ಳಿಯ ಮುಲ್ಲಾ ಒಣಿಯ ವ್ಯಕ್ತಿಯಿಂದ ಕೊರೊನಾ ಸೋಂಕು ತಗುಲಿತ್ತು. ದೆಹಲಿಗೆ ಹೋಗಿ ಬಂದಿದ್ದ ವ್ಯಕ್ತಿಯಿಂದಲೇ 9 ಜನರಿಗೆ ಸೊಂಕು ತಗುಲಿತ್ತು. ಈ ಹಿನ್ನೆಲೆ ಕಳೆದ ಒಂದು ತಿಂಗಳಿಂದ ಮುಲ್ಲಾ ಓಣಿಯನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿತ್ತು.
Advertisement
Advertisement
ಜಿಲ್ಲೆಯಲ್ಲಿ ಈ ವರೆಗೆ 9 ಜನ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯ 17 ಜನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.