ಧಾರವಾಡ: ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕೊರತೆ ಕಾಡುತ್ತಿದ್ದು, ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದ ಜನ ಮನೆಗೆ ಮರಳುವ ಪರಿಸ್ಥಿತಿ ಎದುರಾಗಿದೆ.
ಲಸಿಕಾ ಕೇಂದ್ರ ಎರಡು ಹಾಗೂ ಮೂರರಲ್ಲಿ ವ್ಯಾಕ್ಸಿನ್ ಕೊರತೆ ಕಾಡುತ್ತಿದ್ದು, ಎರಡನೇ ಡೋಸ್ ಹಾಕಿಸಿಕೊಳ್ಳಲು ಬಂದವರನ್ನು ಆರೋಗ್ಯ ಸಿಬ್ಬಂದಿ ವಾಪಸ್ ಕಳುಹಿಸುತ್ತಿದ್ದಾರೆ. ಕೇವಲ 50 ಡೋಸ್ ಮಾತ್ರ ಲಸಿಕೆ ಇದೆ ಎಂದು ಆರೋಗ್ಯ ಸಿಬ್ಬಂದಿ ಹೇಳುತ್ತಿದ್ದಾರೆ. ಹೀಗಾಗಿ ಬೇರೆ ದಾರಿ ಇಲ್ಲದೆ ಜನ ವಾಪಸ್ ಮನೆಗೆ ಮರಳುತ್ತಿದ್ದಾರೆ.
Advertisement
Advertisement
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೈ ಸ್ಪೀಡ್‍ನಲ್ಲಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಇದೀಗ ಕೊರೊನಾ ಲಸಿಕೆಯ ಕೊರತೆ ಕೂಡ ಕಾಡುತ್ತಿದೆ. ಇನ್ನೊಂದೆಡೆ ಸರ್ಕಾರ ಮಾತ್ರ ವ್ಯಾಕ್ಸಿನ್ ಕೊರತೆ ಇಲ್ಲ, ಅರ್ಹರು ಲಸಿಕೆ ಪಡೆದು ಕೊರೊನಾದಿಂದ ಸುರಕ್ಷಿತವಾಗಿರಬೇಕು ಎಂದು ಹೇಳುತ್ತಿದ್ದಾರೆ. ಇದೆಲ್ಲದರ ಮಧ್ಯೆ ಕೊರೊನಾ ಸೋಂಕಿತರಿಗೆ ನೀಡುವ ರೆಮ್‍ಡಿಸಿವಿರ್ ಚುಚ್ಚುಮದ್ದಿನ ಕೊರತೆ ಸಹ ಕಾಡುತ್ತಿದೆ. ಹೀಗಾಗಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.