ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯಿತಿ ಮಹಿಳಾ ಸಿಬ್ಬಂದಿಯೊಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಉಳಿದ ಸಿಬ್ಬಂದಿಗೂ ಆತಂಕ ಎದುರಾಗಿದೆ.
ಮಹಿಳಾ ಸಿಬ್ಬಂದಿಗೆ ಸೋಂಕು ಪತ್ತೆಯಾದ ಹಿನ್ನೆಲೆ ಇಂದು ಇಡೀ ಜಿಲ್ಲಾ ಪಂಚಾಯಿತಿ ಆವರಣ ಹಾಗೂ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಹೊರಗುತ್ತಿದೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಕೊರೊನಾ ತಗುಲಿದೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಜಿಲ್ಲಾ ಪಂಚಾಯಿತಿ ಕಟ್ಟಡ ಇದ್ದು, ಅಲ್ಲಿನ ಸಿಬ್ಬಂದಿ ಹಾಗೂ ಸಾರ್ವಜನಿಕರೂ ಭಯಪಡುವಂತಾಗಿದೆ.
ಜಿಲ್ಲಾ ಪಂಚಾಯಿತಿ ಕಟ್ಟಡ ಹಾಗೂ ಆವರಣವನ್ನು ಸ್ಯಾನಿಟೈಸ್ ಮಾಡುವ ವರೆಗೆ ಸಿಬ್ಬಂದಿ ಕೆಲಸಕ್ಕೆ ಬರಬಾರದು ಎಂದು ಎಚ್ಚರಿಕೆ ನೀಡಲಾಗದೆ. ಜಿಲ್ಲೆಯಲ್ಲಿ ಮೂರು ದಿನದ ಮಗುವಿಗೂ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಈ ವರೆಗೆ 345 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 186 ಜನ ಗುಣಮುಖರಾಗಿ ಡಿಸ್ಚಾರ್ಜ್‍ಆಗಿದ್ದಾರೆ. ಇನ್ನೂ 151 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದಾಗಿ ಜಿಲ್ಲೆಯಲ್ಲಿ 8 ಜನ ಸಾವನ್ನಪ್ಪಿದ್ದಾರೆ.