ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ – ಗುಜರಾತ್‍ನಲ್ಲಿ ವ್ಯಕ್ತಿ ಅರೆಸ್ಟ್

Public TV
1 Min Read
ziva dhoni 1

ನವದೆಹಲಿ: ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡದ ಕಾರಣಕ್ಕೆ ಅವರ ಮಗಳಿಗೆ ಅತ್ಯಾಚಾರಕ್ಕೆ ಬೆದರಿಕೆ ಹಾಕಿದ್ದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ಬಾರಿಯ ಐಪಿಎಲ್‍ನಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡಿವಲ್ಲಿ ವಿಫಲರಾಗಿದ್ದಾರೆ. ಇದಕ್ಕೆ ಅವರ ಮಗಳಿಗೆ ಬೆದರಿಕೆ ಹಾಕಿದ್ದ ಗುಜರಾತ್‍ನ ಕಚ್ ಜಿಲ್ಲೆಯ ನಿವಾಸಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್‍ನ ರಾಂಚಿಯಲ್ಲಿರುವ ರತು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ziva dhoni

ಯುಎಇ ನಡೆಯುತ್ತಿರುವ ಐಪಿಎಲ್-2020 ಈಗಾಗಲೇ 26 ಪಂದ್ಯಗಳನ್ನು ಪೂರ್ಣಗೊಳಿಸಿದೆ. ಈ ಟೂರ್ನಿಯಲ್ಲಿ ಧೋನಿ ನೇತೃತ್ವದ ಚೆನ್ನೈ ತಂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಇದರ ಜೊತೆಗೆ ನಾಯಕನಾಗಿ ಮತ್ತು ಬ್ಯಾಟ್ಸ್ ಮ್ಯಾನ್ ಅಗಿ ಕೂಡ ಎಂಎಸ್ ಧೋನಿಯವರು ನೀರಸ ಪ್ರದರ್ಶನ ತೋರುತ್ತಿದ್ದಾರೆ. ನಿನ್ನೆ ನಡೆದ ಬೆಂಗಳೂರು ವಿರುದ್ಧಪಂದ್ಯದಲ್ಲಿ ಚೆನ್ನೈ ಸೋತಿತ್ತು.

dhoni sakshi ziva

ಕಳೆದ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯದಲ್ಲಿ ಹೀನಾಯವಾಗಿ ಸೋತಿತ್ತು. ಗೆಲುವಿನ ಹಾದಿಯಲ್ಲಿ ಇದ್ದ ಚೆನೈ ತಂಡ ದಿಢೀರ್ ಕುಸಿತದಿಂದ 10 ರನ್‍ಗಳ ಅಂತರದಲ್ಲಿ ಸೋಲನ್ನು ಒಪ್ಪಿಕೊಂಡಿತ್ತು. ಈ ನಂತರ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿರುವ ವಿಜಯ್ ಎಂಬ ವ್ಯಕ್ತಿ ಧೋನಿ ಮಗಳನ್ನು ಅತ್ಯಾಚಾರ ಮಾಡುವುದಾಗಿ ಹೇಳಿದ್ದನು. ಜೊತೆಗೆ ಅಸಭ್ಯ ಪದಗಳನ್ನು ಬಳಸಿ ಐದು ವರ್ಷದ ಕಂದಮ್ಮನನ್ನು ನಿಂದಿಸಿದ್ದನು.

ms dhoni ziva ipl 1

ಚೆನ್ನೈ ಐಪಿಎಲ್-2020ಯಲ್ಲಿ 7 ಪಂದ್ಯಗಳನ್ನು ಆಡಿ ಕೇವಲ ಎರಡಲ್ಲಿ ಗೆದ್ದು ಐದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಜೊತೆಗೆ ಧೋನಿಯವರು ಕೀಪಿಂಗ್‍ನಲ್ಲಿ ಮಿಂಚುತ್ತಿದ್ದರು ನಾಯಕನಾಗಿ ಮತ್ತು ಬ್ಯಾಟ್ಸ್ ಮ್ಯಾನ್ ಆಗಿ ವಿಫಲರಾಗಿದ್ದಾರೆ. ಬುಧವಾರದ ಪಂದ್ಯದಲ್ಲಿ ಕೋಲ್ಕತ್ತಾ ನೀಡಿದ 167 ರನ್‍ಗಳ ಸಾಧಾರಣ ಮೊತ್ತ ಚೇಸ್ ಮಾಡುವಲ್ಲಿ ಚೆನ್ನೈ ವಿಫಲವಾಗಿತ್ತು. ಇದರಿಂದ ಚೆನ್ನೈ ಅಭಿಮಾನಿಗಳಿಗೆ ತುಂಬ ನಿರಾಸೆಯುಂಟಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *