ತುಮಕೂರು: ನಕಲಿ ಪರೀಕ್ಷೆ ಬರೆದವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಚಿವ ಯೋಗೇಶ್ವರ್‌ಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ‘ಬಾಬಾ ಕಾ ಡಾಬಾ’ ಖ್ಯಾತಿಯ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ತುಮಕೂರಿನ ಸಿದ್ದಗಂಗಾ ಮಠಕ್ಕೆ ಬೇಟಿ ಕೊಟ್ಟು ಮಾಧ್ಯಮದವರೊಂದಿಗೆ ಮಾತನಾಡಿದವರು, ಇನ್ನೂ ಎರಡು ವರ್ಷಗಳ ಕಾಲ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ. ಆದರೆ ಯಾರೋ ದೆಹಲಿಗೆ ಹೋಗಿ ಪರೀಕ್ಷೆ ಬರೆದು ಬಂದಿದ್ದೆನೇ, ಫಲಿತಾಂಶಕ್ಕಾಗಿ ಕಾಯುತಿದ್ದೇನೆ ಅಂತಾರೆ. ಅಂಥವರು ನಕಲಿ ಪರೀಕ್ಷೆ ಬರೆದವರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸಚಿವ ಸಿಪಿ ಯೋಗೇಶ್ವರ್‌ಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷ ಅಧಿಕಾರಕ್ಕೆ ಬರಲ್ಲ: ಎಸ್.ಆರ್.ಶ್ರೀನಿವಾಸ್
ಯೋಗೇಶ್ವರ್ ಅವರದ್ದು ನಕಲಿ ಪರೀಕ್ಷೆಯಾಗಿದ್ದು, ಅವರ ಪರಿಕ್ಷೆ ಹಣೆಬರಹ ಅವರಿಗೆ ಗೊತ್ತಿದೆ. ಆದರೆ ಹೈಕಮಾಂಡ್ ಯಡಿಯೂರಪ್ಪ ಮಾಡಿದ ಒಳ್ಳೆ ಕೆಲಸ ಬಗ್ಗೆ ಹೆಚ್ಚಿನ ಅಂಕ ನೀಡಿದ್ದಾರೆ. ಮುಂದಿನ ಚುನಾವಣಾ ಯಡಿಯೂರಪ್ಪ ನೇತೃತ್ವದಲ್ಲೇ ನಡೆಯಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೈಸೂರಿಗೆ ಬಸ್ ಸಂಚಾರ ಆರಂಭ
ಈಗಾಗಲೇ ರಾಜ್ಯವಸ್ತುವಾರಿ ಅರುಣ್ ಸಿಂಗ್ ಬಂದು ಚರ್ಚೆ ನಡೆಸಿ ಸಿಎಂ ಬದಲಾವಣೆ ಮಾತೇ ಇಲ್ಲ ಅಂದಿದ್ದಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯನೋ ಯಡಿಯೂರಪ್ಪ ಸಿಎಂ ಹಾದಿಯಲ್ಲಿ ಮುಂದುವರೆಯೋದು ಅಷ್ಟೇ ಸತ್ಯ ಎಂದು ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.