ಮುಂಬೈ: ಬಾಲಿವುಡ್ ನಟ ಅರ್ಜುನ್ ಕಪೂರ್ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಅರ್ಜುನ್ ಕಪೂರ್ ಬರೆದುಕೊಂಡಿದ್ದು, ಹೋಂ ಐಸೋಲೇಶನ್ ನಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
ನನಗೆ ಕೊರೊನಾ ಸೋಂಕು ತಗುಲಿರೋದು ನಿಮಗೆ ತಿಳಿಸುವುದು ನನ್ನ ಕರ್ತವ್ಯ. ಸದ್ಯ ನಾನು ಆರೋಗ್ಯವಾಗಿದ್ದು, ಕೆಲ ಕೊರೊನ ಗುಣಲಕ್ಷಣಗಳು ಕಾಣಿಸಿಕೊಂಡಿವೆ. ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮ ಬೆಂಬಲಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ಆರೋಗ್ಯದ ಅಪ್‍ಡೇಟ್ ನೀಡುತ್ತಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಆರೋಗ್ಯದತ್ತ ಗಮನ ಕೊಡಿ. ಬೇಗ ಗುಣಮುಖರಾಗಿ ಬನ್ನಿ ಎಂದು ನಟಿ ಕೃತಿ ಸನನ್ ಹಾರೈಸಿದ್ದಾರೆ. ನಟಿ ಜಾಹ್ನವಿ ಕಪೂರ್, ಪರಿಣೀತಿ ಚೋಪ್ರಾ, ನಟ ಹೃತಿಕ್ ರೋಷನ್, ನಿರ್ಮಾಪಕ ಕರಣ್ ಜೋಹರ್ ಸೇರಿದಂತೆ ಬಹುತೇಕ ಸ್ಟಾರ್ ಗಳು ಗುಣಮುಖರಾಗಿ ಬನ್ನಿ ಎಂದು ಅರ್ಜುನ್ ಪೋಸ್ಟ್ ಗೆ ಕಮೆಂಟ್ ಮಾಡಿದ್ದಾರೆ.
https://www.instagram.com/p/CEydxJNp3mB/