ಮೈಸೂರು: ನನಗೆ ಕೆಲಸ ಮಾಡುವ ಕಾಯಿಲೆ ಅವರಿಗೆ ದೆಹಲಿಗೆ ಹೋಗುವ ಕಾಯಿಲೆ ಇದೆ ಎಂದು ತಡರಾತ್ರಿಯೇ ಶಾಸಕ ಅರವಿಂದ್ ಬೆಲ್ಲದ್ ರಾಷ್ಟ್ರ ರಾಜಧಾನಿಗೆ ಪಯಣ ಬೆಳೆಸಿರುವ ವಿಚಾರಕ್ಕೆ ಸಚಿವ ವಿ ಸೋಮಣ್ಣ ತಿರುಗೇಟು ನೀಡಿದ್ದಾರೆ.
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಇಂದು ಭೇಟಿ ನೀಡಿ ಸುತ್ತೂರು ಶ್ರೀಗಳ ಜೊತೆ ಚರ್ಚೆ ಪ್ರಸಕ್ತ ವಿದ್ಯಾಮನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ, ಹೋಗಿಲ್ಲ ಎನ್ನುವುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ವರ್ಲ್ಡ್ ಚೆಸ್ ಚಾಂಪಿಯನ್ ಜೊತೆಗೆ ಕಿಚ್ಚನ ಆಟ
Advertisement
Advertisement
ನಾನು ನನ್ನ ಬುದ್ದಿವಂತಿಕೆಯನ್ನು ಕೊರೊನಾ ನಿಯಂತ್ರಣಕ್ಕೆ ಬಳಸುತ್ತಿದ್ದೇನೆ. ಕೆಲವರು ಆ ಬುದ್ದಿವಂತಿಕೆಯನ್ನು ಬೇರೆಯದಕ್ಕೆ ಬಳಸುತ್ತಿದ್ದಾರೆ. ಯಾವ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದಾರೆ ಆ ಪುಣ್ಯಾತ್ಮರನ್ನೇ ಕೇಳಬೇಕು. ನನ್ನನ್ನು ಸೇರಿದಂತೆ ಪ್ರತಿಯೊಬ್ಬರಿಗೂ ಒಂದೊಂದು ಕಾಯಿಲೆ ಇದೆ. ನನಗೆ ಕೆಲಸ ಮಾಡುವ ಕಾಯಿಲೆ ಅವರಿಗೆ ದೆಹಲಿಗೆ ಹೋಗುವ ಕಾಯಿಲೆ. ಆ ಕಾಯಿಲೆಯ ಮದ್ದು ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು. ಇದನ್ನೂ ಓದಿ: ದೆಹಲಿ ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಅರವಿಂದ ಬೆಲ್ಲದ್
Advertisement
Advertisement
ಇದು ಕೊರೊನಾ ನಿಯಂತ್ರಣ ಮಾಡಬೇಕಾದ ಸಮಯ. ಈ ಸಂದರ್ಭದಲ್ಲಿ ಇಂತಹ ಬೆಳವಣಿಗೆಗಳು ಸರಿಯಲ್ಲ. ಸಿಎಂ ಯಡಿಯೂರಪ್ಪ ಪ್ರತಿ ಜಿಲ್ಲೆ ಜಿಲ್ಲೆ ತಿರುಗುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಗಮನಿಸುತ್ತಿದೆ. ಹೈಕಮಾಂಡ್ ಇದಕ್ಕೆಲ್ಲಾ ಒಂದು ಅಂಕಿತ ಹಾಕಬೇಕಿದೆ ಎಂದಿದ್ದಾರೆ.