ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ- ನಗೆ ಚಟಾಕಿ ಹಾರಿಸಿದ್ರು ಮಾಧುಸ್ವಾಮಿ

Public TV
1 Min Read
MADHUSWAMY 1

ದಾವಣಗೆರೆ: ಮಾಜಿ ಸಚಿವರ ಸಿಡಿ ಪ್ರಕರಣದಲ್ಲಿ ನೈತಿಕತೆ ಬಗ್ಗೆ ಹೆಚ್ಚು ಆದ್ಯತೆ ಕೊಡಬೇಕಾಗುತ್ತದೆ. ನಾನು ಈ ಪ್ರಕರಣಕ್ಕೆ ಉತ್ತರಿಸಿದರೂ ಒಂದು ಮಾತು ಬರುತ್ತದೆ, ಉತ್ತರಿಸುತ್ತಿದ್ದರೂ ಒಂದು ಮಾತು ಬರುತ್ತದೆ. ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ ಎಂದು ಸಚಿವ ಮಾಧುಸ್ವಾಮಿ ನಗೆ ಚಟಾಕಿ ಹಾರಿಸಿದರು.

MADHUSWAMY

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಗುರುಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವರ ವಿಚಾರದಲ್ಲಿ ತಪ್ಪು ಸರಿ ಎಂಬುದನ್ನ ಕೋರ್ಟ್ ಹೇಳುತ್ತದೆ. ಆದರೆ ಅಷ್ಟರಲ್ಲಿ ಅವರ ತೇಜೋವಧೆ ಆಗಿ ಹೋಗಿರುತ್ತದೆ. ಈ ಕಾರಣಕ್ಕಾಗಿಯೇ ಕೆಲ ಸಚಿವರು ಕೋರ್ಟ್ ಮೊರೆ ಹೋಗಿ ಮಾಧ್ಯಮಗಳಲ್ಲಿ ಪ್ರಸಾರ ಆಗದಂತೆ ತಡೆ ತರುತ್ತಿದ್ದಾರೆ ಎಂದರು.

DVG

ತೇಜೋವಧೆ ತಡೆಯಲು ಇಂತಹ ಪ್ರಯತ್ನ ನಡೆದಿದೆ. ಮಾಜಿ ಸಚಿವರ ವಿಚಾರದಲ್ಲಿ ಸಂತ್ರಸ್ತೆ ಬಂದು ದೂರು ನೀಡಿಲ್ಲ ಎಂಬುದು ಚರ್ಚೆ ಆಗುತ್ತದೆ. ಯಾವುದೇ ಆರೋಪ ಇದ್ದರೆ ಅದರ ಬಗ್ಗೆ ಬೇಕಾದವರು ದೂರು ಸಲ್ಲಿಸಬಹುದು ಎಂದು ಈ ಹಿಂದೆ ಸುಪ್ರೀಂಕೋರ್ಟ್ ತೀರ್ಪು ಬಂದಿದೆ. ಅದನ್ನ ಬಳಕೆ ಮಾಡಿಕೊಂಡು ಮೂರನೇ ವ್ಯಕ್ತಿಗಳು ದೂರು ನೀಡುತ್ತಿದ್ದಾರೆ. ಇಲ್ಲವಾದ್ರೆ ಪ್ರಕರಣಕ್ಕೆ ಸಂಬಂಧಿಸಿವರು ಮಾತ್ರ ದೂರು ನೀಡಬೇಕು ಎಂದು ಹೇಳಿದರು.

court getty

25ಕ್ಕೂ ಹೆಚ್ಚು ಸಚಿವರು ಕೋರ್ಟ್ ಮೊರೆ ಹೋಗುತ್ತಿದ್ದಾರೆ ಎಂಬ ವಿಚಾರದ ಕುರಿತು ನನಗೆ ಗೊತ್ತಿಲ್ಲ ಎಂದು ಮಾಧುಸ್ವಾಮಿ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *