ನನ್ನ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಕಡಿಮೆಯಾಗಿದೆ: ಕೆಜಿ ಬೋಪಯ್ಯ

Public TV
1 Min Read
K G Bopaiah

ಮಡಿಕೇರಿ: ನನ್ನ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್‍ಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಸಚಿವರ ಭೇಟಿ ಬಳಿಕ ಒಂದಷ್ಟು ಲಾಕ್‍ಡೌನ್ ಸಡಿಲಿಕೆಗೆ ಯೋಚನೆ ಮಾಡಲಿದ್ದೇವೆ ಎಂದು ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಹೇಳಿದ್ದಾರೆ.

Coronavirus testing

ಕೊಡಗು ಜಿಲ್ಲೆಯಲ್ಲಿ ಒಂದು ವಾರದಿಂದ ಸೋಂಕಿನ ಪ್ರಕರಣಗಳು ಕೊಂಚ ಇಳಿಮುಖ ಅಗುತ್ತಿದೆ. ಅಲ್ಲದೇ ಜಿಲ್ಲೆಯ ಮೂರು ತಾಲೂಕುಗಳ ಪೈಕಿ ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸೋಂಕಿತರ ಪ್ರಕರಣ ಕಡಿಮೆಯಾಗುತ್ತಿದ್ದು, ಅನೇಕ ಗ್ರಾಮಗಳು ಕೊರೊನಾ ಮುಕ್ತ ಗ್ರಾಮಗಳಾಗುತ್ತಿವೆ. ಇದನ್ನೂ ಓದಿ: ಕೆಲವೊಂದಕ್ಕೆ ವಿನಾಯಿತಿ ನೀಡಿ ಲಾಕ್‍ಡೌನ್ ವಿಸ್ತರಣೆ – ಸಿಎಂ ಬಿಎಸ್‍ವೈ

coronavirus

ನನ್ನ ವಿರಾಜಪೇಟೆ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್‍ಗಳ ಸಂಖ್ಯೆ ಕಡಿಮೆಯಾಗಿದೆ. ಕೊಡಗು ಜಿಲ್ಲೆಯ ಮಟ್ಟಿಗೆ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಸ್ತುವಾರಿ ಸಚಿವರ ಭೇಟಿ ಬಳಿಕ ಒಂದಷ್ಟು ಜಿಲ್ಲಾ ವ್ಯಾಪ್ತಿಯ ಸಡಿಲಿಕೆಗೆ ಯೋಚಿಸಲಾಗುವುದು. ಆದರೆ ಸರ್ಕಾರ ಏನು ನಿರ್ಧಾರ ಕೈಗೊಳ್ಳುತ್ತದೆಯೋ ಅದರ ಮೇಲೆ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ: ಕೋಡಿಶ್ರೀ ಭವಿಷ್ಯ

coronavirus vaccine Serum Institute COVID 19

ಸದ್ಯ ವಿರಾಜಪೇಟೆ ಕ್ಷೇತ್ರದಲ್ಲಿ 38 ಗ್ರಾಮ ಪಂಚಾಯಿತಿಗಳು ಇದ್ದು, ಅವುಗಳ ಪೈಕಿ 28ಕ್ಕೂ ಹೆಚ್ಚು ಪಂಚಾಯಿತಿಗಳಲ್ಲಿ ಒಂದು ಪ್ರಕರಣವೂ ಇಲ್ಲದೇ ಕೊರೊನಾ ಮುಕ್ತವಾಗಿದೆ. ಉಳಿದ 6-7 ಪಂಚಾಯಿತಿಗಳಲ್ಲಿ ಒಂದಷ್ಟು ಪ್ರಕರಣಗಳಿವೆ. ಅವುಗಳನ್ನು ನಾವೇ ಹಾಟ್ ಸ್ಪಾಟ್ ಎಂದು ಮಾಡಿಕೊಂಡಿದ್ದೇವೆ. ಅಲ್ಲಿಗೆ ಹೋಗಿ ಸಭೆ ಮಾಡಿ ಕೊರೊನಾ ನಿಯಂತ್ರಣ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಿದ ಪರಿಣಾಮದಿಂದಾಗಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ. ಕೊಡಗು ಜಿಲ್ಲೆ ಕಂಟ್ರೋಲ್‍ಗೆ ಬಂದಿದೆ. ಜಿಲ್ಲೆಯ ಜನರ ಸಲಹಾಕಾರದಿಂದ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *