ನನ್ನ ನೆಚ್ಚಿನ ಹುಡುಗರು: ರಾಧಿಕಾ ಪಂಡಿತ್

Public TV
1 Min Read
yash

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿದ್ದು, ಆಗಾಗ ಮಕ್ಕಳ ಫೋಟೋವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ರಾಧಿಕಾ ಪಂಡಿತ್ ತಮ್ಮ ನೆಚ್ಚಿನ ಹುಡುಗರ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

ನಟಿ ರಾಧಿಕಾ ಇನ್‍ಸ್ಟಾಗ್ರಾಂನಲ್ಲಿ ಪತಿ ಯಶ್ ಮತ್ತು ಮಗನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ‘My Favourite Boys’ (ನನ್ನ ನೆಚ್ಚಿನ ಹುಡುಗರು) ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ. ಫೋಟೋದಲ್ಲಿ ಯಶ್ ತಮ್ಮ ಮುದ್ದು ಮಗನನ್ನು ಎತ್ತಿಕೊಂಡಿದ್ದು, ಅವನ ಮುಖವನ್ನೇ ನೋಡುತ್ತಾ ಸಂತಸಪಟ್ಟಿದ್ದಾರೆ. ಇನ್ನೂ ಜೂನಿಯರ್ ಯಶ್ ಕೂಡ ನಗುತ್ತಾ ಕ್ಯೂಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾನೆ.

YASH FAMILY

ರಾಧಿಕಾ ಅವರು ಈ ಫೋಟೋ ಅಪ್ಲೋಡ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ 2.71 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಫೋಟೋವನ್ನು ಲೈಕ್ಸ್ ಮಾಡಿದ್ದಾರೆ.

ಸ್ಯಾಂಡಲ್‍ವುಡ್ ರಾಕಿಂಗ್ ದಂಪತಿ ತಮ್ಮ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಬಹಳ ಚ್ಯೂಸಿಯಾಗಿರುತ್ತಾರೆ. ಈ ಹಿಂದೆ ಮಗಳ ಫೋಟೋವನ್ನು ಬಹಳ ದಿನಗಳ ಬಳಿಕ ರಿವೀಲ್ ಮಾಡಿದ್ದರು. ಇದೇ ರೀತಿ ಜೂನಿಯರ್ ಫೋಟೋ ಕೂಡ ರಿವೀಲ್ ಮಾಡಿದ್ದರು.

https://www.instagram.com/p/CAsdWrSAXxz/?igshid=vf9uyem8vfe1

ಯಶ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಈ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು.

ರಾಧಿಕಾ ಪಂಡಿತ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಮೊದಲ ಬಾರಿಗೆ ತಮ್ಮ ಪುತ್ರನ ಫೋಟೋವನ್ನು ರಿವೀಲ್ ಮಾಡಿದ್ದು, “ಜೂನಿಯರ್ ಯಶ್‍ಗೆ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದ ಬೇಕು ಎಂದು ಬರೆದುಕೊಂಡಿದ್ದರು.

YASH 01

ಅದೇ ರೀತಿ ಯಶ್ ಕೂಡ ತಮ್ಮ ಮಗನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ, “ನಿಮ್ಮ ಪ್ರೀತಿ, ಆಶೀರ್ವಾದ, ಹಾರೈಕೆ ಸದಾ ಈ ನನ್ನ ಪುಟ್ಟ ಕಂದನ ಮೇಲಿರಲಿ” ಬರೆದುಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *