– ಹಿಂದೂ ಆಟಗಾರನಾಗಿ ಪಾಕ್ ತಂಡದಲ್ಲಿ ಬಚಾವ್ ಆಗೋದು ಅತ್ಯಂತ ಕಷ್ಟ
ಇಸ್ಲಾಮಾಬಾದ್: ನನ್ನ ವೃತ್ತಿಜೀವನ ಹಾಳು ಮಾಡಿದ್ದೇ ಶಹೀದ್ ಅಫ್ರಿದಿ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಗಂಭೀರ ಆರೋಪ ಮಾಡಿದ್ದಾರೆ.
ಪಾಕ್ ತಂಡದ ಪರ ಆಡಿದ ಎರಡನೇ ಹಿಂದೂ ಆಟಗಾರ ದಾನಿಶ್ ಕರೇನಿಯಾ ಆಗಿದ್ದಾರೆ. ದಾನಿಶ್ ಅವರಿಗೂ ಮುನ್ನ ಅವರ ಸಹೋದರ ಸಂಬಂಧಿ ಅನಿಲ್ ದಲಪತ್ ಆಡಿದ್ದರು. ದಲಪತ್ ಪಾಕ್ ತಂಡದಲ್ಲಿ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಆಗಿದ್ದರು. ದಾನಿಶ್ ವೃತ್ತಿಜೀವನದ ಕೆಲವು ಕಹಿ ಘಟನೆಗಳನ್ನು ಹಂಚಿಕೊಂಡಿದ್ದು, ಅಫ್ರಿದಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
Advertisement
Advertisement
ಮಾಧ್ಯಮವೊಂದರ ಜೊತೆಗೆ ಮಾತನಾಡಿದ 39 ವರ್ಷದ ದಾನಿಶ್, “ಧರ್ಮದ ಹೊರತಾಗಿ ಅಫ್ರಿದಿ ಅವರ ತಾರಮ್ಯದ ಹಿಂದಿನ ಕಾರಣ ತಿಳಿಯಲು ಕಷ್ಟವಾಗುತ್ತಿತ್ತು. ದೇಶಿಯ ಕ್ರಿಕೆಟ್ ಅಥವಾ ಏಕದಿನ ಕ್ರಿಕೆಟ್ ಆಡುವಾಗ ಅಫ್ರಿದಿ ಯಾವಾಗಲೂ ನನ್ನ ವಿರುದ್ಧವೇ ಇರುತ್ತಿದ್ದರು. ಒಬ್ಬ ವ್ಯಕ್ತಿ ನಿಮ್ಮ ವಿರುದ್ಧ ದ್ವೇಷ ಸಾಧಿಸುತ್ತಿದ್ದರೆ ಅದು ಧರ್ಮವನ್ನು ಬಿಟ್ಟು ಬೇರೆ ಏನೂ ಇರಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
Advertisement
“ಹಿಂದೂ ಆಟಗಾರನಾಗಿ ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಬಚಾವ್ ಆಗುವುದು ಅತ್ಯಂತ ಕಷ್ಟ. ಹಿಂದೂ ಧರ್ಮದವರಾಗಿದ್ದರಿಂದ ನನ್ನನ್ನು ತಂಡದಲ್ಲಿ ಅತ್ಯಂತ ಹೀನಾಯವಾಗಿ ನೋಡಲಾಗಿತ್ತು. ನಾನು ಹಿಂದೂ ಧರ್ಮದವನಾಗಿದ್ದರಿಂದ ಅಫ್ರಿದಿ ಯಾವಾಗಲೂ ನನ್ನ ವಿರುದ್ಧ ಕಿಡಿಕಾರುತ್ತಿದ್ದ. ಅಂತಹ ಸನ್ನವೇಶದಲ್ಲಿ ನನ್ನ ಸ್ಥಿತಿ ಅತ್ಯಂತ ಕೆಟ್ಟದಾಗಿತ್ತು” ಎಂದು ದಾನಿಶ್ ಕನೇರಿಯಾ ತಿಳಿಸಿದರು.
Advertisement
ಅಫ್ರಿದಿಯಿಂದಾಗಿಯೇ ನಾನು ವೃತ್ತಿ ಜೀವನದಲ್ಲಿ ಕೇವಲ 18 ಏಕದಿನ ಪಂದ್ಯಗಳನ್ನು ಆಡಿದೆ. ಇಲ್ಲವಾದಲ್ಲಿ ಹೆಚ್ಚಿನ ಏಕದಿನ ಪಂದ್ಯಗಳಲ್ಲಿ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸುತ್ತಿದ್ದೆ. ಏಕದಿನ ಕ್ರಿಕೆಟ್‍ನಲ್ಲಿ ಶಾಹೀದ್ ಅಫ್ರಿದಿ ಬೇರೆ ಸ್ಪಿನ್ನರ್‍ಗಳಿಗೆ ನೀಡಿದ ಪ್ರೋತ್ಸಾಹ ಹಾಗೂ ಸಹಕಾರ ನನಗೆ ನೀಡಲಿಲ್ಲ. ಆದರೂ ಪಾಕಿಸ್ತಾನ 10 ವರ್ಷಗಳ ಕಾಲ ಆಡಿದ್ದೇನೆಂಬ ಸಂತೋಷ ಹಾಗೂ ಗೌರವ ಇದೆ” ಎಂದು ನೆನೆದರು.
“ಆಡುವ ಇಲೆವೆನ್‍ನಲ್ಲಿ ಇಬ್ಬರು ಸ್ಪಿನ್ನರ್ ಗಳು ಇರುತ್ತಾರೆ. ಆದರೆ ನನ್ನ ಫಿಲ್ಡಿಂಗ್ ಉತ್ತಮವಾಗಿಲ್ಲ ಎಂದು ಹೇಳಲಾಗುತ್ತಿತ್ತು. ಆಗ ತಂಡದಲ್ಲಿ ಯಾರು ಹೇಳಿಕೊಳ್ಳುವ ಮಟ್ಟಿಗೆ ಉತ್ತಮ ಫಿಲ್ಡರ್ ಗಳಾಗಿರಲಿಲ್ಲ. ಅಷ್ಟೇ ಅಲ್ಲದೆ ಆಗ ಪಾಕ್ ತಂಡ ಅಷ್ಟೇನು ಹೆಸರು ಮಾಡಿರಲಿಲ್ಲ. ಮೋಯಿನ್ ಖಾನ್, ರಶೀದ್ ಲತೀಫ್, ಇಂಜಾಮಾಮ್ ಉಲ್ ಹಕ್ ಹಾಗೂ ಯೂನಿಸ್ ಖಾನ್ ಅವರ ನಾಯಕತ್ವದಲ್ಲಿ ಆಡಿದ್ದೇನೆ. ಅಫ್ರಿದಿ ನಾಯಕತ್ವದಲ್ಲಿ ಅತ್ಯಂತ ಕಡಿಮೆ ಪಂದ್ಯಗಳನ್ನಾಡಿದ್ದೇನೆ. ಇಂಜಾಮಾಮ್ ಹಾಗೂ ಯೂನಿಸ್ ಭಾಯ್ ನನಗೆ ಸಾಕಷ್ಟು ಸಹಕಾರ, ಪ್ರೋತ್ಸಾಹ ನೀಡಿದ್ದರು” ಎಂದು ತಿಳಿಸಿದರು.