ಧಾರವಾಡ: ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ, ಸದ್ಯ ನಮ್ಮ ಆದ್ಯತೆ ಕೋವಿಡ್ ನಿಯಂತ್ರಣ ಮಾಡುವದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಈಗ ಯಾವುದೇ ಸಿಎಂ ಮತ್ತು ನಾಯಕತ್ವ ಬದಲಾವಣೆ ಇಲ್ಲ, ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ನಾಯಕರಲ್ಲಿ ಚರ್ಚೆಯೂ ನಡೆದಿಲ್ಲ. ನಾನು ಸಿಎಂ ಸ್ಥಾನದ ಆಕಾಂಕ್ಷಿ ಅನ್ನೋದು ವದಂತಿ ಮಾತ್ರ ಎಂದ ಅವರು, ಪ್ರಧಾನಿ ನರೇಂದ್ರ ಮೋದಿಯಂತಹ ಶ್ರೇಷ್ಠ ನಾಯಕರ ಅಡಿಯಲ್ಲಿ ಕೆಲಸ ಮಾಡುತ್ತಿರುವೆ, ಬಹಳ ಸಂತೋಷ ಮತ್ತು ಅಭಿಮಾನದಿಂದ ಕೆಲಸ ಮಾಡುತ್ತಿದ್ದೇನೆ ಎಂದರು.
Advertisement
Advertisement
ಇಲ್ಲಿ ಯಡಿಯೂರಪ್ಪವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಇದೆಲ್ಲವೂ ಉಹಾಪೋಹಗಳು. ಸಿಎಂ ಹೇಳಿಕೆ ವಿಚಾರ ನಿನ್ನೆಯೇ ಮುಗಿದ ಅಧ್ಯಾಯ, ಪ್ರತಿ ವಾರದಂತೆ ಇವತ್ತು ನಾನು ದೆಹಲಿಗೆ ಹೊರಟಿರುವೆ. ನನ್ನ ಕೇಂದ್ರ ಸ್ಥಾನ ಇರುವ ಕಾರಣಕ್ಕೆ ದೆಹಲಿಗೆ ಹೊರಟಿರುವೆ. ಯಡಿಯೂರಪ್ಪ ಯಾವ ಹಿನ್ನೆಲೆಯಲ್ಲಿ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ ಗೊತ್ತಿಲ್ಲ. ಆದರೂ ಅವರ ಹೇಳಿಕೆಯಲ್ಲಿ ಬೇರೆ ಅರ್ಥ ಏನಿಲ್ಲ ಎಂದು ಹೇಳಿದರು.
Advertisement
Advertisement
ಸಿಎಂ ರೇಸ್‍ನಲ್ಲಿ ಬೆಲ್ಲದ್ ಹೆಸರು:
ಸಿಎಂ ರೇಸ್‍ನಲ್ಲಿ ಅರವಿಂದ್ ಬೆಲ್ಲದ ಇದ್ದಾರೆ, ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೇಣುಕಾಚಾರ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲಾರೆ. ಅದರ ಬಗ್ಗೆ ನಾನು ಏನೂ ಹೇಳಲಾರೆ ಎಂದರು. ಯಾವುದೇ ಸಹಿ ಸಂಗ್ರಹವನ್ನು ಹೈಕಮಾಂಡ್ ಸಹಿಸುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ. ಒಂದೇ ಸಹಿ ಸಂಗ್ರಹ ನಡೆದಿತ್ತು. ಅದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದು ಮಾತ್ರ. ಸದನ ಸದನ ನಡೆದಾಗ ಸಹಿ ಮಾಡಿದ್ದೇವೆ. ಅದೊಂದೆ ಸಹಿ ಸಂಗ್ರಹ ನಡೆದಿದೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಸಿಎಂ ರಾಜೀನಾಮೆ ಮಾತುಗಳ ಹಿಂದಿನ ರಹಸ್ಯ ತಿಳಿಸಿದ ಶಾಸಕ ರಾಜೂಗೌಡ
ನಮ್ಮದು ಶಿಸ್ತಿನ ಪಕ್ಷವಾಗಿದ್ದು, ಇಲ್ಲಿ ಸಹಿ ಸಂಗ್ರಹಕ್ಕೆ ಅವಕಾಶ ಇಲ್ಲ. ಹಾಗೆ ಮಾಡಿದವರ ಮೇಲೆ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆ. ಪಕ್ಷದ ಶಾಸಕಾಂಗ ಸಭೆಯಲ್ಲೇ ಏನೇ ಇದ್ದರೂ ಚರ್ಚೆ ನಡೆಯುತ್ತದೆ. ಗ್ರಾಮೀಣದ ರಸ್ತೆ, ಗ್ರಾಮಿಣ ಭಾಗಕ್ಕೆ ಸಂಬಂಧಿಸಿದ ಶಾಸಕರ ಸಹಿ ಅದು. ನನ್ನ ಕ್ಷೇತ್ರದಲ್ಲಿ ಏನು ಮಾಡಬೇಕು ನಾನು ಮಾಡುತ್ತಿರುವೆ ಎಂದು ಉತ್ತರಿಸಿದರು. ಇದನ್ನೂ ಓದಿ: ಸಿಎಂ ರೇಸ್ ಬಗ್ಗೆ ನಾನು ಹೇಳಿಕೆ ನೀಡಲ್ಲ, 1 ಸಹಿ ಸಂಗ್ರಹ ನಡೆದಿತ್ತು: ಬೆಲ್ಲದ
ಸಿಎಂ ಹೇಳಿದ್ದೇನು?: ನಾನು ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ. ಬಿಜೆಪಿಗೆ ಪರ್ಯಾಯದ ವ್ಯಕ್ತಿ ಇಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ರಾಜ್ಯದಲ್ಲಿ ದೇಶದಲ್ಲಿ ಪರ್ಯಾಯ ನಾಯಕರು ಇದ್ದಾರೆ. ಕರ್ನಾಟಕದಲ್ಲೂ ಪರ್ಯಾಯ ವ್ಯಕ್ತಿಗಳು ಇಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಎಲ್ಲಿಯವರೆಗೆ ಹೈಕಮಾಂಡ್ ವಿಶ್ವಾಸ ಇರುತ್ತೋ ಅಲ್ಲಿವರೆಗೂ ನಾನು ಸಿಎಂ ಆಗಿರುತ್ತೇನೆ ಎಂದು ಹೇಳಿದ್ದರು.