ಬೆಂಗಳೂರು: ನಮ್ಮ ನಡುವೆ ಇಲ್ಲದ ವ್ಯಕ್ತಿಯ ಮೇಲೆ ಕೆಸರೆರಚಾಟ ಮಾಡುತ್ತಿರುವುದರ ಬಗ್ಗೆ ದುಃಖವಿದೆ ಎಂದು ನಟ ಚೇತನ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.
ನಿರ್ದೇಶಕ ಇಂದ್ರಜಿತ್ ನಟ ಚಿರು ಸಾವಿನ ಕುರಿತು ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರರಂಗದಲ್ಲಿ ಪರವಿರೋಧ ಚರ್ಚೆ ನಡೆಯುತ್ತಿವೆ. ಈ ಮಧ್ಯೆ ನಟ ಚೇತನ್ ಸೋಶಿಯಲ್ ಮಿಡಿಯಾದ ಮೂಲಕ ನಟ ಚಿರಂಜೀವಿ ಬಗ್ಗೆ ಮಾತನಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್
ನಟ ಚೇತನ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಮಾದಕ ವಸ್ತುವಿನ ಜಾಗೃತಿ ಅಭಿಯಾನ, ಪುನರ್ವಸತಿ ಕಾರ್ಯಕ್ರಮಗಳು, ಸರ್ಕಾರದ ಉತ್ತಮ ನೀತಿಗಳು, ಮತ್ತು ಸರಿಯಾದ ತನಿಖೆಗಳು ನಮಗೆ ಬೇಕಾಗಿದೆ. ಮಸಿ ಬಳಿಯುವುದು ಮತ್ತು ಉದ್ರೇಕಕಾರಿ ಹೇಳಿಕೆಗಳು ನಮಗೆ ಬೇಡವಾದುದ್ದು” ಎಂದು ಬರೆದುಕೊಂಡಿದ್ದಾರೆ.
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) August 30, 2020
ಅಷ್ಟೇ ಅಲ್ಲದೇ “ಸಿಗರೇಟು, ಮದ್ಯ, ಮಾದಕ ಮತ್ತು ಪಾರ್ಟಿಗೆ ಹೋಗುವ ಅಭ್ಯಾಸಗಳು ನನಗಿಲ್ಲ. ಮುಂದುವರೆದು ಕನ್ನಡ ಇಂಡಸ್ಟ್ರಿಯ ಯಾವುದೇ ಸಾಮಾಜಿಕ ಅಭ್ಯಾಸಗಳ ಬಗ್ಗೆ ಗೊತ್ತಿಲ್ಲದ ನನಗೆ, ನಮ್ಮ ನಡುವೆ ಇಲ್ಲದ ವ್ಯಕ್ತಿಯ ಮೇಲೆ ಕೆಸರೆರಚಾಟ ಮಾಡುತ್ತಿರುವುದರ ಬಗ್ಗೆ ದುಃಖವಿದೆ. ನಾವು ಯಾವುದೇ ಆರೋಪಗಳನ್ನು ಹೋರಿಸಿದರೂ ಅದನ್ನು ಸಮರ್ಥಿಸಲು ಅಥವಾ ಉತ್ತರಿಸಲು ಆ ಧ್ವನಿಯೇ ಇಲ್ಲದಿರುವ ಸಮಯದಲ್ಲಿ ಅವರ ಮೇಲೆ ಕೆಸರು ಎರಚುವುದನ್ನು ನಾನು ಖಂಡಿಸುತ್ತೇನೆ” ಎಂದು ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.