– ಸಾರ್ವಜನಿಕರ ದರ್ಶನಕ್ಕೆ ಅವಕಾಶವಿಲ್ಲ
ಹಾಸನ: ಕೊರೊನಾ ಹಿನ್ನೆಲೆಯಲ್ಲಿ ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇವರ ದರ್ಶನಕ್ಕೆ ಈ ಬಾರಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ. ಜೊತೆಗೆ ಪ್ರಸಾದದ ವ್ಯವಸ್ಥೆಯೂ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ನವೆಂಬರ್ 5ರಿಂದ 16ರವರೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುವುದು. ಕಳೆದ ವರ್ಷ ಸುಮಾರು 5 ಲಕ್ಷದಷ್ಟು ಜನ ಹಾಸನಾಂಬೆ ದೇವರ ದರ್ಶನಕ್ಕೆ ಪಡೆದಿದ್ದಾರೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಸಾರ್ಜನಿಕರನ್ನು ನಿಯಂತ್ರಿಸಲು ಕಷ್ಟಸಾಧ್ಯ ಆಗಿರುವುದರಿಂದ ಈ ಬಾರಿ ಯಾರಿಗೂ ಹಾಸನಾಂಬೆಯ ನೇರ ದರ್ಶನಕ್ಕೆ ವಕಾಶವಿಲ್ಲ ಎಂದು ತಿಳಿಸಿದರು.
Advertisement
Advertisement
ಹಾಸನ ನಗರದ ಸುಮಾತು ಹತ್ತು ಜಾಗದಲ್ಲಿ ಎಲ್‍ಇಡಿ ಪರದೆ ಹಾಕಲಾಗಿದ್ದು, ಹಾಸನನಾಂಬ ದೇವರ ಪೂಜೆಯ ನೇರ ಪ್ರಸಾರ ಮಾಡಲಾಗುವುದು. ಹಾಸನಾಂಬ ಲೈವ್2020 ಎಂದು ಸರ್ಚ್ ಮಾಡುವ ಮೂಲಕ ಯೂಟ್ಯೂಬ್‍ನಲ್ಲಿಯೂ ಹಾಸನಾಂಬೆ ಪೂಜೆಯನ್ನು ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.
Advertisement
ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಮೊದಲ ದಿನ ಮತ್ತು ಕೊನೆಯ ದಿನ ಮಾತ್ರ ಆಹ್ವಾನಿತರಿಗಷ್ಟೇ ದೇವರ ನೇರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಸನನಾಂಬ ದೇವಾಲಯದ ಬಾಗಿಲು ವರ್ಷಕ್ಕೊಮ್ಮೆ ತೆಗೆದರು ಕೂಡ ಹಲವಾರು ಪವಾಡಕ್ಕೆ ಹೆಸರುವಾಸಿಯಾಗಿದೆ. ದೇವಾಲಯದ ಬಾಗಿಲು ಹಾಕುವಾಗ ಹಚ್ಚಿದ ದೀಪ ಮುಂದಿನವರ್ಷ ಬಾಗಿಲು ತೆರೆದಾಗಲೂ ಆರಿರುವುದಿಲ್ಲ. ದೇವರಿಗೆ ಮುಡಿಸಿದ ಹೂವು ಬಾಡಿರುವುದಿಲ್ಲ, ದೇವರ ನೈವೇದ್ಯಕ್ಕೆ ಇಟ್ಟ ಅನ್ನ ಹಳಸಿರುವುದಿಲ್ಲ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದು ದೇವಿಯ ಪವಾಡ ಕಣ್ತುಂಬಿಕೊಳ್ಳುತ್ತಾರೆ.