– ಬೈಕಿಗೆ ಡಿಕ್ಕಿ ಹೊಡೆದ ಕಾರ್
ಧಾರವಾಡ/ಹುಬ್ಬಳ್ಳಿ: ಹಾನಗಲ್ ಕ್ಷೇತ್ರದ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ಪುತ್ರ ಮದ್ಯದ ನಶೆಯಲ್ಲಿ ಕಾರು ಚಾಲನೆ ಮಾಡುವ ವೇಳೆ ಬೈಕ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ತೋಳನಕರೆಯ ಬಳಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಾಯಗೊಂಡಿದ್ದಾನೆ. ಮಾಜಿ ಶಾಸಕರ ಪುತ್ರ ವೆಂಕಟೇಶ್ ಕಾರ್ ಚಾಲನೆ ವೇಳೆ ಮದ್ಯಪಾನ ಮಾಡಿರೋದು ತಿಳಿದು ಬಂದಿದೆ. ಗಾಯಾಳುವಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಿ, ಡಿಸ್ಚಾರ್ಜ್ ಮಾಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಕಾರ್ ವಶಕ್ಕೆ ಪಡೆದುಕೊಂಡಿದ್ದಾರೆ. ವೆಂಕಟೇಶ್ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಹೆಚ್ಚಾದ ಕೊರೊನಾ ಪ್ರಕರಣ – ಇಂದು 4,272 ಜನಕ್ಕೆ ಸೋಂಕು